ಕುಸ್ತಿ ಪಟುಗಳಿಗೆ ಲೈಂಗಿಲ ದೌರ್ಜನ್ಯ ನೀಡಿದ ಆರೋಪಿತ ಸಂಸದನ ಬಂಧನಕ್ಕೆ ಆಗ್ರಹ

IMG-20230601-WA0022.webp
Published on

ಬೆಳಗಾವಿ : ದೇಶದ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ ಸಿಂಗ್ ಅವರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಹೋರಾಟಗಾರರು, ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ, ಆರೋಪಿ ಬ್ರಿಜ್ ಭೂಷಣ್ ಸಿಂಗ್ ನನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ತಕ್ಷಣ ಕಿತ್ತು ಹಾಕಿ ಬಂಧಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಒಲಿಂಪಿಕ್ ಪದಕ ವಿಜೇತರು, ವಿಶ್ವ ಚಾಂಪಿಯನ್ ಕುಸ್ತಿಪಟುಗಳಾದ ಸಾಕ್ಷಿ ಮಲ್ಲಿಕ, ವಿನಿಷ್  ಪೊಗಟ್ ಮುಂತಾದ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬ್ರಿಜ್ ಭೂಷಣಸಿಂಗ್  ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ನವದೆಹಲಿಯ ಜಂತರ್‌ಮಂಥರ್‌ನಲ್ಲಿ ಭಜರಂಗ್ ಪೂನಿಯಾ ಸೇರಿದಂತೆ ದೇಶದ ಹಲವು ಕುಸ್ತಿ ಕ್ರೀಡಾಪಟುಗಳು ಕಳೆದ 45 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಆರೋಪಿಯನ್ನು ಈವರೆಗೆ ಬಂಧಿಸಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
 

ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೊದಗಿ ಮಾತನಾಡಿ, ರಾಷ್ಟ್ರಕ್ಕೆ ಕೀರ್ತಿ ತಂದು ಕೊಟ್ಟ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದು ಇಡೀ ದೇಶವೇ ತಲೆ ತಗ್ಗಿಸುವಂತದ್ದು. ಸಾಮಾಜಿಕ ನ್ಯಾಯದಡಿಯಲ್ಲಿ ಸಂಸತ್ ಸ್ಥಾನದಿಂದ ಬ್ರಿಜ್ ಭೂಷಣ್ ಸಿಂಗ್ ನನ್ನು ವಜಾ ಮಾಡಬೇಕು. ಆ ಸ್ಥಾನದಲ್ಲಿ ಕುಳಿತುಕೊಳ್ಳಲು ಆತ ಯೋಗ್ಯನಲ್ಲ. ಆತ ಓರ್ವ ಕಾಮುಕ ವ್ಯಕ್ತಿಯಾಗಿದ್ದು, ತಕ್ಷಣವೇ ಬಂಧಿಸಬೇಕು. ಇಂದು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದ್ದೇವೆ. ಜೂ.5ರಂದು ದೊಡ್ಡ ಪ್ರಮಾಣದ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸಿದಗೌಡ ಮೊದಗಿ, ಎನ್.ಆರ್.ಲಾತೂರ್, ಜಿ.ವ್ಹಿ.ಕುಲಕರ್ಣಿ, ಶಿವಲೀಲಾ ಮಿಸಾಳೆ, ಕಿರಣ ಬೇಡಿ, ವೈಶಾಲಿ ಕಮ್ಮಾರ ಇತರರಿದ್ದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸಿದಗೌಡ ಮೊದಗಿ, ಎನ್.ಆರ್.ಲಾತೂರ್, ಜಿ.ವ್ಹಿ.ಕುಲಕರ್ಣಿ, ಶಿವಲೀಲಾ ಮಿಸಾಳೆ, ಕಿರಣ ಬೇಡಿ, ವೈಶಾಲಿ ಕಮ್ಮಾರ ಇತರರಿದ್ದರು.

ಬಳಿಕ ರೈತ ಮುಖಂಡೆ ಜಯಶ್ರೀ ಗುರನ್ನವರ ಮಾತನಾಡಿ, ಇಡೀ ದೇಶ ಮತ್ತು ವಿಶ್ವಕ್ಕೆ ಕೀರ್ತಿ ತಂದ ಮಹಿಳಾ ಕ್ರೀಡಾಪಟುಗಳು ಇಂದು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಮೊನ್ನೆ ಆರೋಪಿ ಬ್ರಿಜ್ ಭೂಷಣ ಸಿಂಗ್ ಗೆ ಸಂಸತ್ತಿನಲ್ಲಿ  ಪ್ರಧಾನಮಂತ್ರಿ ಮೋದಿ ಅವರು ಸನ್ಮಾನ ಮಾಡುತ್ತಿದ್ದಾರೆ. ಇದೇ ಏನು ನಿಮ್ಮ ಬೇಟಿ ಬಚಾವ್ ಬೇಟಿ ಪಡಾವ್ ಘೋಷಣೆ ಅರ್ಥ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನವನ್ನ ತಾವು ಹರಾಜು ಹಾಕುತ್ತಿದ್ದಾರೆ. ನಿಜವಾಗಲೂ ನಿಮಗೆ ಬೇಟಿ ಬಚಾವ್, ಬೇಟಿ ಪಡಾವ್ ಕಾಲಜಿ ಇದ್ದರೆ ತಕ್ಷಣವೇ ಆತನನ್ನು ಬಂಧಿಸಿ ಕಾನೂನಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಕೀಲ ಎನ್.ಆರ್.ಲಾತೂರ್, ಜಿ.ವ್ಹಿ.ಕುಲಕರ್ಣಿ, ಶಿವಲೀಲಾ ಮಿಸಾಳೆ, ಕಿರಣ ಬೇಡಿ, ವೈಶಾಲಿ ಕಮ್ಮಾರ, ಇಸ್ಮಾಯಿಲ್ ಮಕಾನದಾರ್, ವಿ. ಸುಶೀಲಾ, ಸುಜೀತ್ ಮುಳಗುಂದ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net