

ಬಂಟ್ವಾಳ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದಲ್ಲಿ ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ವತಿಯಿಂದ ಯಕ್ಷಗಾನ ತಾಳಮದ್ದಳೆ ಹಾಗೂ ಹಿರಿಯ ಭಾಗವತ ದಿ.ಕುಬಣೂರು ಶ್ರೀಧರ ರಾವ್ ಸ್ಮರಣೆ ಬಿ.ಸಿ.ರೋಡಿನ ತುಳು ಶಿವಳ್ಳಿ ಸಭಾಭವನದಲ್ಲಿ ನಡೆಯಿತು.
ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಒಂಬತ್ತು ದಿನಗಳ ಭಾರತ ದರ್ಶನ ಸರಣಿ ತಾಳಮದ್ದಳೆಯ ಸಮಾರೋಪವೂ ನಡೆಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು. ಕಲಾವಿದ ಜಬ್ಬಾರ್ ಸಮೋ ಸಂಪಾಜೆ ಅವರು ಕುಬಣೂರು ಶ್ರೀಧರ ರಾವ್ ಅವರ ಸಂಸ್ಮರಣೆ ಮಾಡಿದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಕೃಷ್ಣಪ್ಪ ಕಿನ್ಯ, ಮಾಜಿ ಸದಸ್ಯ ಭಾಸ್ಕರ ರೈ ಕುಕ್ಕುವಳ್ಳಿ, ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ವೈದ್ಯರಾದ ಡಾ.ಶಿವಪ್ರಸಾದ್ ಶೆಟ್ಟಿ, ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು ಅಧ್ಯಕ್ಷ ರಾಜಾರಾಮ ಭಟ್, ಯಕ್ಷಗಾನ ಸಂಟಕ ಬಿ.ಭುಜಬಲಿ ಧರ್ಮಸ್ಥಳ ಉಪಸ್ಥಿತರಿದ್ದರು. ವಿಶ್ವ ಭಾರತಿ ಸಂಚಾಲಕ ಪ್ರಶಾಂತ್ ಹೊಳ್ಳ ಸ್ವಾಗತಿಸಿದರು. ವಿಶ್ವಭಾರತಿ ಕಾರ್ಯದರ್ಶಿ ಕುಶಲ ಮುಡಿಪು ವಂದಿಸಿದರು. ಜಗದೀಶ ಹೊಳ್ಳ ಮೊಡಂಕಾಪು ನಿರ್ವಹಿಸಿದರು. ಅಶಕ್ತ ಕಲಾವಿದ ಜಿ.ಕೆ.ನಾವಡ ಅವರಿಗೆ ಗೌರವಿಸಲಾಯಿತು.