ಕ್ರೀಡೆಯಿಂದ ಜೀವನ ಸ್ಫೂರ್ತಿ : ಪ್ರೊ ಕಬಡ್ಡಿಪಟು ರತನ್ ಕೆ.ಎ. ಹೇಳಿಕೆ

kabaddi
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಕ್ರೀಡೆ ಎಂಬುದು ಜೀವನಕ್ಕೆ ಸ್ಫೂರ್ತಿಯಾಗಿದೆ. ಸೋತಾಗ ಕುಗ್ಗದೆ, ಗೆಲುವಾದಾಗ ಹಿಗ್ಗೆದೆ ಛಲ ಬಿಡದೆ ನಿರಂತರ ಅಭ್ಯಾಸ ಮಾಡಬೇಕು ಎಂದು ಪ್ರೊ ಕಬಡ್ಡಿ ಪಟು, ಬರೋಡಾ ಬ್ಯಾಂಕ್ ಸಿಬ್ಬಂದಿ ರತನ್ ಕೆ.ಎ. ಹೇಳಿದರು.

ಮಂಗಳವಾರ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವತಿಯಿಂದ ಉಜಿರೆ ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ದ.ಕ., ಉಡುಪಿ, ಚಿಕ್ಕಮಗಳೂರು ಜಿಲ್ಲೆ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಹಿಂದೆ ಉಭಯ ಜಿಲ್ಲೆಗೆ ಮಾತ್ರ ಕಬಡ್ಡಿ ಪಂದ್ಯಾಟ ಆಯೋಜಿಸಿದ್ದೆವು. ಪ್ರಸಕ್ತ ಚಿಕ್ಕಮಗಳೂರು ಜಿಲ್ಲೆಯನ್ನು ಸೇರಿಸಿಕೊಂಡು ಅವಕಾಶ ಕಲ್ಪಿಸಲಾಗಿದೆ. ಕಬಡ್ಡಿ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೂ ಉತ್ಕೃಷ್ಟ ಅನುಭವ ಕಲ್ಪಿಸುವ ನೆಲೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಕ್ರೀಡೆಯನ್ನು ಸ್ಪರ್ಧಾ ಮನೋಭಾವವಾಗಿ ಸ್ವೀಕರಿಸಿ ಎಂದರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ, ಎಸ್.ಡಿ.ಎಂ. ಕ್ರೀಡಾ ಕಾರ್ಯದರ್ಶಿ ರಮೇಶ್ ಎಚ್., ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ಕಬಡ್ಡಿ ತರಬೇತುದಾರ ಕೃಷ್ಣಾನಂದ ರಾವ್, ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್ ಉಪಸ್ಥಿತರಿದ್ದರು.

ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿಭಾಗ ಮುಖ್ಯಸ್ಥ ಶ್ರೇಯಾಂಕ್ ಜೈನ್ ಸ್ವಾಗತಿಸಿದರು. ಪ್ರಾಧ್ಯಾಪಕ ಸಾಯಿಚರಣ್ ಸಿ. ಎಚ್. ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕ ಸಂಪತ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರು. ಸಿವಿಲ್ ವಿಭಾಗದ ಪ್ರಾಧ್ಯಾಪಕ ಪ್ರವೀಣ್ ಬಿ.ಜಿ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net