

ಉಡುಪಿ: ಪತಿ ಮರಣಾನಂತರ ಮಾನಸಿಕ ಖಿನ್ನತೆ ಉಲ್ಬಣಗೊಂಡು ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆರ್ಗಾ ಗ್ರಾಮದ ಈಶ್ವರನಗರ ನಿವಾಸಿ ಸುಮತಿ (72) ಆತ್ಮಹತ್ಯೆಗೈದವರು.
ಇವರು ಅನೇಕ ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಳುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ವರ್ಷ ಇವರ ಗಂಡ ಅನಾರೋಗ್ಯದಿಂದ ಮೃತಪಟ್ಟಿದ್ದು, ಆ ಬಳಿಕ ಮಾನಸಿಕ ಖಿನ್ನತೆ ಸಮಸ್ಯೆ ಉಲ್ಬಣಗೊಂಡಿತ್ತು. ಹೀಗಾಗಿ 25 ದಿನಗಳ ಹಿಂದೆ ಉಡುಪಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಒಂದು ವಾರದ ಬಳಿಕ ಮನೆಗೆ ಕರೆದುಕೊಂಡು ಬಂದಿದ್ದರೂ ಮಾನಸಿಕ ಖಿನ್ನತೆ ಸಮಸ್ಯೆ ಗುಣಮುಖವಾಗದೆ ತೀವ್ರಗೊಂಡಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಭಾನುವಾರ ಮನೆಯ ಪಕ್ಕದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.