ಮಾವೂರ ಬಳಿಯ ಕಾಲುವೆಗೆ ಬಿದ್ದು ಮಹಿಳೆ ಆತ್ಮಹತ್ಯೆ

Crime Logo
Published on

ಸವಣೂರ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಕಾಲುವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಮಲಂಜಿ ಓಣಿಯಲ್ಲಿ ಗುರುವಾರ ನಡೆದಿದೆ.
ಮೋಬಿನಾ ಅಲ್ತಾಫ ಗೋಲಿವಾಲೆ (32) ಮೃತ ಮಹಿಳೆ.
ಇವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮಾವೂರ ರಸ್ತೆ ಕಾಲುವೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net