ವಿದ್ಯಾರ್ಥಿನಿ ಹೆಸರಲ್ಲಿ ನಕಲಿ ಖಾತೆ ತೆರೆದು ಮಾನಸಿಕ ಕಿರುಕುಳ

cen police station
ಸಿಇಎನ್ ಪೊಲೀಸ್ ಠಾಣೆ
Published on

ಶಿವಮೊಗ್ಗ: ಇನ್‌ಸ್ಟಾಗ್ರಾಂನಲ್ಲಿ ವಿದ್ಯಾರ್ಥಿನಿಯೊಬ್ಬಳ ಹೆಸರು ಹೋಲುವಂತೆ ನಕಲಿ ಖಾತೆ ತೆರೆದು ಆಕೆಯ ಫೋಟೊಗಳನ್ನು ಅಪ್‌ಲೋಡ್ ಮಾಡಿ ಮಾನಸಿಕ ಕಿರುಕುಳ ನೀಡಿದ್ದು ನೊಂದ ವಿದ್ಯಾರ್ಥಿನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿನಿಯ ಇನ್‌ಸ್ಟಾಗ್ರಾಂ ಖಾತೆಗೆ ಆರು ತಿಂಗಳ ಹಿಂದೆ ಆಕೆಯದ್ದೆ ಹೆಸರಿನ ಎರಡು ಪ್ರತ್ಯೇಕ ಇನ್‌ಸ್ಟಾಗ್ರಾಂ ಖಾತೆಗಳಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ರಿಕ್ವೆಸ್ಟ್ ಅಕ್ಸೆಪ್ಟ್ ಮಾಡುವ ಬದಲು ಖಾತೆಯನ್ನು ಪರಿಶೀಲಿಸಿದಾಗ ವಿದ್ಯಾರ್ಥಿನಿಯ ಫೋಟೊಗಳನ್ನು ಅಪ್‌ಲೋಡ್ ಮಾಡಲಾಗಿತ್ತು. ಸಂಬಂಧಿಕರು ಯಾರೋ ತಮಾಷೆಗಾಗಿ ಈ ರೀತಿ ಮಾಡುತ್ತಿರಬಹುದು ಎಂದು ಪರಿಶೀಲನೆ ನಡೆಸಿದಾಗ ಯಾರೂ ಇನ್‌ಸ್ಟಾಗ್ರಾಂ ಖಾತೆ ತೆಗೆದಿಲ್ಲ ಅನ್ನುವುದು ಖಚಿತವಾಗಿದೆ.
ತನ್ನ ಹೆಸರು ಮತ್ತು ಅನುಮತಿ ಇಲ್ಲದೆ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿ, ಮಾನಸಿಕ ಕಿರಿಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿ ದೂರು ನೀಡಿದ್ದಾರೆ. ಸಿಇಎನ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net