ಒತ್ತಡದ ಬದುಕಿನಿಂದ ಮಾನಸಿಕ ಕಾಯಿಲೆ: ಜೆಎಂಎಫ್‌ಸಿ ಹಿರಿಯ ಶ್ರೇಣಿ ನ್ಯಾಯಾಧೀಶ ಎಸ್.ಮಹೇಶ್ ಅಭಿಮತ

Mental Health Day mandya
Published on

ಪಾಂಡವಪುರ: ಒತ್ತಡದ ಬದುಕು ಹಾಗೂ ಆಧುನಿಕ ಜೀವನ ಶೈಲಿಯಿಂದಾಗಿ ಜನರು ಮಾನಸಿಕ ಕಾಯಿಲೆಗೆ ಒಳಗಾಗುತ್ತಿದ್ದಾರೆ ಎಂದು ಜೆಎಂಎಫ್‌ಸಿ ಹಿರಿಯ ಶ್ರೇಣಿ ನ್ಯಾಯಾಧೀಶ ಎಸ್.ಮಹೇಶ್ ಹೇಳಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾನಸಿಕ ಆರೋಗ್ಯದ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ. ಪ್ರತಿಯೊಬ್ಬರು ಒಂದಲ್ಲ ಒಂದು ರೀತಿ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿದ್ದೇವೆ ಎಂದರು.

ನಮ್ಮ ಪೂರ್ವಿಕರು ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿರಲಿಲ್ಲ. ಏಕೆಂದರೆ ಅವರು ಹೆಚ್ಚು ಒತ್ತಡಕ್ಕೆ ಒಳಗಾಗುತ್ತಿರಲಿಲ್ಲ. ಆದರೀಗ ಆಧುನೀಕ ಜೀವನ ಶೈಲಿಗೆ ಒಳಗಾಗಿ ಪ್ರತಿ ವಿಷಯಕ್ಕೂ ಒತ್ತಡಕ್ಕೆ ಸಿಲುಕುತ್ತಿದ್ದಾರೆ. ಒತ್ತಡದ ಬದುಕಿನಿಂದಾಗಿ ಸರಿಯಾಗಿ ನಿದ್ರೆ, ಊಟ ಮಾಡದೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಆದ್ದರಿಂದ ಒತ್ತಡದ ಬದುಕಿನಿಂದ ಹೊರಬರಬೇಕಿದೆ. ಯೋಗ, ಧ್ಯಾನದ ಕಡೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಮಿನ್ಸ್ ಆಸ್ಪತ್ರೆ ಮನೋವೈದ್ಯಶಾಸ್ತ್ರ ವೈದ್ಯಾಧಿಕಾರಿ ಡಾ.ಜೆ.ಬಿಂದಿಯಾ ಮಾತನಾಡಿ, ಮಾನಸಿಕ ಹಾಗೂ ದೈಹಿಕವಾಗಿ ಒಂದಲ್ಲ ಒಂದು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದೇವೆ. ದಿನನಿತ್ಯ ನಾವು ಕೆಲಸ ಕಾರ್ಯ ಆಗಿರಬಹುದು. ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು, ಕಚೇರಿ ಕೆಲಸಗಳಲ್ಲಿ ಸೇರಿದಂತೆ ಸಾಕಷ್ಟು ವಿಷಯಗಳಲ್ಲಿ ಒತ್ತಡಕ್ಕೆ ಸಿಲುಕಿ ಅನಾರೋಗ್ಯಕ್ಕೆ ಒಳಗಾಗುತ್ತೇವೆ. ಹಾಗಾಗಿ ಅದರಿಂದ ಹೊರಬರಲು ಇರುವ ಉಪಾಯ ಮಾರ್ಗಗಳನ್ನು ಕಂಡು ಆರೋಗ್ಯವಂತ ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ನಾಯಾಧೀಶರಾದ ಎಂ.ಮಂಜುನಾಥ್, ಬಿ.ಪಾರ್ವತಮ್ಮ, ಕೆ.ಎನ್.ಕಿಶೋರ್‌ಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ಕಾಳೇಗೌಡ, ಕಾರ್ಯದರ್ಶಿ ಕೆ.ಎನ್.ನಾಗರಾಜು, ಟಿಎಚ್‌ಒ ಡಾ.ಸಿ.ಎ.ಅರವಿಂದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net