

ಆಳಂದ: ಒತ್ತಡ ಜೀವನದಿಂದಾಗಿ ಮನುಷ್ಯ ಮಾನಸಿಕ ಖಿನ್ನತೆ ಒಳಗಾಗುತ್ತಾನೆ. ಮಾನಸಿಕ ಕಾಯಿಲೆ ಎಂಬುದು ಶಾಪವಲ್ಲ, ಅದನ್ನು ಗುಣಪಡಿಸಬಹುದು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಎಸ್.ಎಂ.ಅರುಟಗಿ ಹೇಳಿದರು.
ಜೆಎಂಎಫ್‌ಸಿ ಕೋರ್ಟ್ ಆವರಣದಲ್ಲಿ ನ್ಯಾಯ ನಿಮ್ಮದು ನೆರವು ನಮ್ಮದು, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯಾವಾದಿಗಳ ಸಂಘ, ಆರೋಗ್ಯ ಇಲಾಖೆ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದಿAದ ಗುರುವಾರ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ದಿನಾಚರಣೆ ಮತ್ತು ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರೋಗ್ಯ ಇಲಾಖೆಯಿಂದ ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಮಾನಸಿಕ ಆರೋಗ್ಯ ಪರಿಸ್ಥಿತಿಗಳ ಪ್ರಭುತ್ವ ಮತ್ತು ಪ್ರಭಾವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು.
ಪ್ರಧಾನ ಸಿವಿಲ್ ನ್ಯಾಯಾಧೀಶ ಯಲ್ಲಪ್ಪ ಕಲ್ಲಾಪುರ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಸ್ನೇಹಾ ಪಾಟೀಲ್, ಸಂಪನ್ನೂಲ ವ್ಯಕ್ತಿ ಎಂ.ವಿ.ಏಕಬೋಟೆ ಉಪನ್ಯಾಸ ನೀಡಿದರು. ಸರ್ಕಾರಿ ಸಹಾಯಕ ಅಭಿಯೋಜಕ ಇಸ್ಮಾಯಿಲ್ ಪಟೇಲ್, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ತಯ್ಯಬ್‌ಅಲಿ ಜರದೀ, ಪ್ರಮುಖರಾದ ಜ್ಯೋತಿ ಬಂದಿ, ಬಲಭೀಮ ಶಿಂಧೆ ಇತರರಿದ್ದರು. ಬಿ.ಜಿ.ಬೀಳಗಿ ನಿರೂಪಣೆ ಮಾಡಿ ವಂದಿಸಿದರು.