

ಹಾವೇರಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಇಜಾರಿಲಕ್ಮಾಪುರದಲ್ಲಿ ಸೋಮವಾರ ನಡೆದಿದೆ.
ದ್ಯಾಮವ್ವ ಗುಡ್ಡಪ್ಪ ಮಾಳಗಿ (45) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಇವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ಮನೆಯಲ್ಲಿಯೆ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.