ಬಂಕಾಪುರ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.
ಅನೀತಾ ಮಹೇಶ ಬಂಗಾಲಿ (26) ಮೃತ ಮಹಿಳೆ.
ಇವಳು ಕಳೆದ 4 ವರ್ಷದಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಳು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.