ಮಾನಸಿಕ-ದೈಹಿಕವಾಗಿ ವ್ಯತಿರಿಕ್ತ ಪರಿಣಾಮ

26-msk-1
Published on

ಮಸ್ಕಿ: ಪಟ್ಟಣದ ತಹಸಿಲ್ ಕಚೇರಿ ಆವರಣದಲ್ಲಿ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಕೆಲಸದ ಹೊರೆ ಕಡಿಮೆ ಮಾಡಬೇಕು. ಮೂಲ ಸೌಲಭ್ಯ ಒದಗಿಸಬೇಕು. ಕಂದಾಯ ಇಲಾಖೆ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಇದು ಹಲವಾರು ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಮಹಾಂತೇಶ ಮುರಾರಿ ಹೇಳಿದರು.

ಅಗತ್ಯವಿರುವ ಕಂಪ್ಯೂಟರ್, ಲ್ಯಾಪ್‌ಟಾಪ್, ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹಾಕುತ್ತಿದ್ದು, ಇದರಿಂದ ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಆರೋಗ್ಯ ಸಮಸ್ಯೆಗೆ ಸಿಲುಕುವ ಪರಿಸ್ಥಿತಿ ಬಂದಿದೆ. ಮೊಬೈಲ್ ಆ್ಯಪ್‌ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ಒತ್ತಡ ಹೇರಲಾಗುತ್ತಿದೆ. ಇದರಿಂದ ಮಾನಸಿಕ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳಾಗುತ್ತಿವೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net