ಮಾನಸಿಕ ಅಸ್ವಸ್ಥ ನೇಣಿಗೆ ಶರಣು

Hanging
Published on

ನಿಪ್ಪಾಣಿ: ಮಾನಸಿಕ ಅಸ್ವಸ್ಥನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆನ್ನಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಜ್ಯೋತಿರಾಮ ಶಂಕರ ಜನವಾಡೆ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಬಹಳ ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ಜ್ಯೋತಿರಾಮ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನಿಗೆ ತಾಯಿ, ಪುತ್ರ ಹಾಗೂ ಸಹೋದರಿಯರು ಇದ್ದಾರೆ. ಸ್ಥಳೀಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net