ಸಾಂಸ್ಕೃತಿಕ ಚಟುವಟಿಕೆಯಿಂದ ಮಾನಸಿಕ ಸ್ಥಿರತೆ ಸಾಧ್ಯ

Mental stability is possible through cultural activity
ಬಾಗಲಕೋಟೆ ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಾಂಸ್ಕೃತಿಕ ಚಟುವಟಿಕೆ ಸಮಿತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಮೂರು ದಿನಗಳ ಕಲಾ ಸಂಭ್ರಮದಲ್ಲಿ ನೃತ್ಯ ಮಾಡುತ್ತಿರುವ ವಿದ್ಯಾರ್ಥಿಗಳು.
Published on

ಬಾಗಲಕೋಟೆ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ ಸಾಧ್ಯ ಎಂದು ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್.ಮೂಗನೂರಮಠ ಹೇಳಿದರು.

ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಾಂಸ್ಕೃತಿಕ ಚಟುವಟಿಕೆ ಸಮಿತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಮೂರು ದಿನಗಳ ಕಲಾ ಸಂಭ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಮಾನಸಿಕವಾಗಿ ವಿಕಸನವಾಗಬೇಕಾದರೆ ಓದಿನ ಜತೆಗೆ ನಮ್ಮ ಕಲೆ, ಸಂಸ್ಕೃತಿ ರೂಢಿಸಿಕೊಳ್ಳಬೇಕು. ಆದರೆ ಇಂದಿನ ಯುವ ಜನತೆ ದೇಶಿಯ ಸಂಪ್ರದಾಯವನ್ನು ಮರೆತು ಪಾಶ್ಚಾತ್ಯ ಸಂಸ್ಕೃತಿಯತ್ತ ವಾಲುತ್ತಿರುವುದು ವಿಷಾದನೀಯ ಸಂಗತಿ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಡೆಯುವ ಎಲ್ಲ ಪಠ್ಯೇತರ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

*ಮೂರು ದಿನಗಳ ಕಲಾ ಸಂಭ್ರಮಕ್ಕೆ ತೆರೆ ಮಹಾವಿದ್ಯಾಲಯದಲ್ಲಿ ಮೂರು ದಿನ ನಡೆದ ಸಂಗೀತ ವಿಭಾಗದ ಸುಗಮ ಸಂಗೀತ, ದೇಶಭಕ್ತಿ ಗಾಯನ, ಸಮೂಹ ಗಾಯನ, ನೃತ್ಯ ವಿಭಾಗದ ಜಾನಪದ ನೃತ್ಯ, ಶಾಸ್ತ್ರೀಯ ನೃತ್ಯ , ರಂಗವೇದಿಕೆಯ ಏಕಪಾತ್ರ ಅಭಿನಯ, ಮಿಮಿಕ್ರಿ, ಮೈಮ ಲಲಿತ ಕಲೆಗಳ ಚಿತ್ರ ಬಿಡಿಸುವುದು, ಪೋಸ್ಟರ್ ಮೇಕಿಂಗ್, ಕ್ಲೇ ಮಾಡಲಿಂಗ್, ರಂಗೋಲಿ ಸ್ಪರ್ಧೆ ಸೇರಿ ವಿವಿಧ ಕಾರ್ಯಕ್ರಮಗಳು ನಡೆದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net