

ಮಡಿಕೇರಿ: ಮಾನಸಿಕ ಶಕ್ತಿ, ಯೋಗ, ದ್ಯಾನ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಜಿ.ರಾಜೇಂದ್ರ ಹೇಳಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಐಕ್ಯಂ ೨೦೨೩-೨೪ ಎಂಬ ಶಿರ್ಷಿಕೆಯಲ್ಲಿ ನಡೆದ ಕಾಲೇಜು ವಾರ್ಷಿಕೊತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ಬಿಎಸ್ಸಿ ನರ್ಸಿಂಗ್ ಕಾಲೇಜು ಇರುವುದು ಹೆಮ್ಮೆಯ ವಿಷಯವಾಗಿದೆ. ವೈದ್ಯಕೀಯ ಕಾಲೇಜಿನಲ್ಲಿ ಪ್ರಾರಂಭಿಸಿ ಪ್ರಸ್ತುತ ೪೦೦ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವು ಹೆಮ್ಮ ವಿಷಯ ಎಂದ ಅವರು, ಮಡಿಕೇರಿಯಲ್ಲಿ ಸರ್ಕಾರಿ ಜಾಗದ ಸಮಸ್ಯೆ ಇದೆ. ಆದಾಗ್ಯೂ ಜನಪ್ರತಿನಿಧಿಗಳ ಮೂಲಕ ನರ್ಸಿಂಗ್ ಕಾಲೇಜಿಗೆ ಅವಶ್ಯವಿರುವ ಜಾಗವನ್ನು ಮಂಜೂರು ಮಾಡಲು ಪ್ರಯ್ನತಿಸುವುದಾಗಿ ತಿಳಿಸಿದರು.
ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡಲು ಲಕ್ಷಾಂತರ ರುಪಾಯಿಯಿದೆ. ಸರ್ಕಾರಿ ಕಾಲೇಜಿನಲ್ಲಿ ಅತೀ ಕಡಿಮೆ ಶುಲ್ಯದಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಿರಿ. ದೇಶರಕ್ಷಣೆಯಲ್ಲಿ ಸೈನಿಕರ ಪಾತ್ರ ಎಷ್ಟು ದೊಡ್ಡದ್ದೊ ಅಷ್ಟೆ ರೋಗಿಗಳ ರಕ್ಷಣೆಯಲ್ಲಿ ಶುಶ್ರೂಷಕ ಪಾತ್ರ ಹೆಚ್ಚಿದೆ. ಮಾನಸಿಕ ಶಕ್ತಿ, ಯೋಗ, ದ್ಯಾನ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕರೋನ ಸಮಯದಲ್ಲಿ ಶುಶ್ರೂಷಕರು ಮನೆ, ಮಕ್ಕಳನ್ನು ಬಿಟ್ಟು ಕರ್ತವ್ಯ ನಿರ್ವಹಿಸಿರುವನ್ನು ಸ್ಮರಿಸಿದರು.
ಸ್ಥಾನೀಯ ವೈದ್ಯಾಧಿಕಾರಿ ಡಾ.ವಿ.ಎಸ್.ಸತೀಶ್ ಮಾತನಾಡಿ, ವಿದ್ಯಾರ್ಥಿಗಳು ನರ್ಸಿಂಗ್ ಸೇವೆಯನ್ನು ಮೈಗೂಡಿಸಿಕೊಳ್ಳಬೇಕು. ಸೇವ ಮನೋಭಾವ, ನಿಸ್ವಾರ್ತ ಸೇವೆ ರೂಡಿಸಿಕೊಳ್ಳಬೇಕು. ವೃತ್ತಿಯಲ್ಲಿ ಮುಂದೆ ಬರಬೇಕು. ಭಾವನಾತ್ಮಕವಾಗಿ ಸ್ಪಂದಿಸಬೇಕು. ಸಂಸ್ಥೆಯ ಘನತೆಯನ್ನು ಹೆಚ್ಚಿಸಲು ಶಿಸ್ತು ಪಾಲಿಸಬೇಕು ಎಂದು ಕಿವಿ ಮಾತು ಹೇಳಿದರು.
ವೈದ್ಯಕೀಯ ಅಧೀಕ್ಷಕ ಡಾ.ರೂಪೇಶ್ ಗೋಪಾಲ್ ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ಶುಶ್ರೂಷಕರ ಆರೈಕೆ ಅತೀ ಮುಖ್ಯ. ರೋಗಿಗಳೊಂದಿಗೆ ತುಂಬ ಸಮಯ ಕಳೆಯುವುದು ಶುಶ್ರೂಷಕರು ಮಾತ್ರ. ಅವರ ಕೊಡುಗೆ ಆಸ್ಪತ್ರೆಗೆ ಹೆಚ್ಚಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕ್ರೀಡಾಕೂಟ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ನರ್ಸಿಂಗ್ ವಿದ್ಯಾರ್ಥಿಗಳಿಂದ ಅತ್ಯಾಕರ್ಷಕ ನೃತ್ಯ, ನಾಟಕ ಸೇರಿದಂತೆ ವಿವಿಧ ಬಗೆಯ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿದರು.
ವೇದಿಕೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರ ಎ.ಕೆ.ಮಂಜುಳ, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಗಳಾದ ಎ.ಎಲ್.ಸ್ವಾಮಿ, ಡಾ.ನರಸಿಂಹ ರೈ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.