ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

sid (3)
Published on

ಸಿದ್ದಾಪುರ: ಸಿದ್ದಾಪುರ ಜ್ಞಾನಸರಸ್ವತಿ ಪಿಯು ಕಾಲೇಜಿನಲ್ಲಿ ಸಿಇಟಿ, ನೀಟ್, ಜೆಇಇ ಪ್ರವೇಶ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ವಾರ್ಗದರ್ಶನ ಕಾರ್ಯಕ್ರಮ ಶುಕ್ರವಾರ ನಡೆಯಿತು. ಜ್ಞಾನಸುಧಾ ಸಮೂಹ ಸಂಸ್ಥೆಗಳ ಡೀನ್‌ಅಕಾಡೆಮಿಕ್ಸ್ ಡಾ.ಮಿಥುನ್, ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವ, ತಯಾರಿ ವಿಧಾನಗಳು ಹಾಗೂ ವಿದ್ಯಾರ್ಥಿಗಳು ಅನುಸರಿಸಬಹುದಾದ ಅಭ್ಯಾಸ ಕ್ರಮಗಳ ಬಗ್ಗೆ ವಿಶ್ಲೇಷಣೆ ನೀಡಿದರು. ಸುಮುಖ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಪ್ರಾಂಶುಪಾಲ ಅಮರೇಶ್ ಹೆಗ್ಡೆ, ಉಪಪ್ರಾಂಶುಪಾಲ ಹರ್ಷ ಶೆಟ್ಟಿ ಹಾಗೂ ಉಪನ್ಯಾಸಕ ವೃಂದವರು ಉಪಸ್ಥಿತರಿದ್ದರು. ಉಪನ್ಯಾಸಕ ಗಣೇಶ್ ಶೆಟ್ಟಿ ಸ್ವಾಗತಿಸಿ, ಉಪಪ್ರಾಂಶುಪಾಲ ಹರ್ಷ ಶೆಟ್ಟಿ ವಂದಿಸಿದರು. ಉಪನ್ಯಾಸಕ ಶಂಕರನಾರಾಯಣ ಉಪಾಧ್ಯಾಯ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net