ಗೋಡೆ ಬಿದ್ದು ವ್ಯಾಪಾರಿ ಸಾವು

Gode
Published on

ಸುಳ್ಯ: ನಗರದ ಗಾಂಧಿನಗರದಲ್ಲಿರುವ ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೇ ಕಟ್ಟಡದ ಕಬ್ಬಿಣ ಸಾಮಗ್ರಿಗಳನ್ನು ತೆಗೆಯುತ್ತಿದ್ದ ವೇಳೆ ಗೋಡೆ ಮಗುಚಿ ಬಿದ್ದು, ಸುಳ್ಯದ ಎಪಿಎಂಸಿ ಬಳಿ ಗುಜರಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ಖಾದರ್(ಅಂದುಕಾರ್-48) ಎಂಬುವರು ಶುಕ್ರವಾರ ಮೃತಪಟ್ಟಿದ್ದಾರೆ.

ಅಬ್ದುಲ್ ಖಾದರ್ ಹಲವಾರು ವರ್ಷಗಳಿಂದ ಸುಳ್ಯದಲ್ಲಿ ಗುಜರಿ ವ್ಯಾಪಾರ ಮಾಡುತ್ತಿದ್ದರು. ಹಳೇ ಕಟ್ಟಡದ ಕಬ್ಬಿಣ ಸಾಮಗ್ರಿಗಳನ್ನು ಖರೀದಿಸುವ ವ್ಯಾಪಾರ ನಡೆಸುತ್ತಿದ್ದರು. ಫ್ಯಾಕ್ಟರಿ ಕಳೆದ ಕೆಲ ವರ್ಷಗಳಿಂದ ವ್ಯವಹಾರ ಸ್ಥಗಿತಗೊಳಿಸಿದ್ದು, ಹಳೆಯ ಕಟ್ಟಡವನ್ನು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದರು. ಕೆಲಸದಾಳು ಜತೆ ಶುಕ್ರವಾರ ಬೆಳಗ್ಗೆ ಗೋಡೆಯ ಮೇಲ್ಭಾಗದಲ್ಲಿದ್ದ ಕಬ್ಬಿಣದ ಸರಳನ್ನು ಹಗ್ಗ ಹಾಕಿ ಎಳೆಯುತ್ತಿರುವಾಗ ಗೋಡೆ ಮಗುಚಿ ಅಬ್ದುಲ್ ಖಾದರ್ ಮೇಲೆ ಬಿದ್ದು, ಅವರು ಸ್ಥಳದಲ್ಲೇ ಮೃತಪಟ್ಟರು. ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net