

ಮಳವಳ್ಳಿ: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಪಟ್ಟಣದ ಬಿಜೆಪಿ ಮಂಡಲದ ವತಿಯಿಂದ ಭಾನುವಾರ ಕೋಟೆ ಆಂಜನೇಯಸ್ವಾಮಿ ದೇವಾಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಿಜೆಪಿ ರಾಜ್ಯ ಮುಖಂಡ ಜಿ.ಮುನಿರಾಜು ನೇತೃತ್ವದಲ್ಲಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಹೆಸರಿನಲ್ಲಿ ಪೂಜೆ ಸಲ್ಲಿಸಲಾಯಿತು. ನಂತರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ನನ್ನ ಮಣ್ಣು ನನ್ನ ದೇಶ ಅಭಿಯಾನದಡಿ ಮಣ್ಣು ಸಂಗ್ರಹಿಸಲಾಯಿತು. ನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಿದರು.
ಪುರಸಭೆ ಸದಸ್ಯರಾದ ರವಿ, ಪುಟ್ಟಸ್ವಾಮಿ, ಮಾಜಿ ಸದಸ್ಯರಾದ ಜಗದೀಶ್, ರಾಜೀವ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಬ್ಬಣ್ಣಿ ಬಸವರಾಜು, ಮಂಡಲ ಅಧ್ಯಕ್ಷ ಎಂ.ಎನ್.ಕೃಷ್ಣ, ಪ್ರಧಾನ ಕಾರ್ಯದರ್ಶಿ ಕೆ.ಸಿ.ನಾಗೇಗೌಡ, ಮುಖಂಡರಾದ ದೋರನಹಳ್ಳಿ ಕುಮಾರಸ್ವಾಮಿ, ಅಪ್ಪಾಜಿಗೌಡ, ಶಕುಂತಲಾ, ಮಂಜು, ನಾಗಣ್ಣ, ಮಹೇಶ್, ಮೋಹನ ಇತರರಿದ್ದರು.