ಗುತ್ತಿಗೆ ನೌಕರರನ್ನು ಆರೋಗ್ಯ ಇಲಾಖೆಯಲ್ಲಿ ವಿಲೀನಗೊಳಿಸಿ

12-02-Shiva-3
ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿಯ ಗುತ್ತಿಗೆ ನೌಕರರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮಾನಾಂತರ ಹುದ್ದೆಗಳಲ್ಲಿ ವಿಲೀನಗೊಳಿಸಬೇಕು ಎಂದು ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಗುತ್ತಿಗೆ ನೌಕರರ ಸಂಘದಿಂದ ಸೋಮವಾರ ಮನವಿ ಸಲ್ಲಿಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ಜಿ.ರಾಮು, ಪದಾಕಾರಿಗಳಾದ ಎಂ.ಎಂ.ಮಠಪತಿ, ವೆಂಕಟರಾಮರೆಡ್ಡಿ, ರಾಜೇಶ ದೇಶಪಾಂಡೆ, ನಾಗಲಿಂಗ ಅರಕೇರ, ಓಂಪ್ರಸಾದ, ಶ್ಯಾಮಸುಂದರ ಇದ್ದರು.
Published on

ರಾಯಚೂರು: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿಯ ಗುತ್ತಿಗೆ ನೌಕರರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮಾನಾಂತರ ಹುದ್ದೆಗಳಲ್ಲಿ ವಿಲೀನಗೊಳಿಸಬೇಕು ಎಂದು ಗುತ್ತಿಗೆ ನೌಕರರ ಸಂಘ ಒತ್ತಾಯಿಸಿದೆ.
ಸಂಘದ ನಿಯೋಗ ಸ್ಥಳೀಯ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಸೋಮವಾರ ಮನವಿ ಸಲ್ಲಿಸಿ, ವಿಲೀನ ಪ್ರಕ್ರಿಯೆ ಮುಗಿಯುವವರೆಗೆ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಕಳೆದ 20 ವರ್ಷಗಳಿಂದ 1,800 ಗುತ್ತಿಗೆ ನೌಕರರು ಎಚ್‌ಐವಿ ಪರೀಕ್ಷೆ, ಚಿಕಿತ್ಸಾ ಕೇಂದ್ರಗಳ್ಲಲಿ ಆಪ್ತ ಸಮಾಲೋಚನೆ ನಡೆಸಿ ಸೋಂಕಿತರಿಗೆ ಆತ್ಮಸ್ಥೆರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಜತೆಗೆ ಎಚ್‌ಐವಿ ಏಡ್ಸ್ ಕುರಿತು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ.
ಕೇಂದ್ರ ಸರ್ಕಾರ ನೀಡುತ್ತಿರುವ ವೇತನದ ಜತೆಗೆ ರಾಜ್ಯ ಸರ್ಕಾರದಿಂದಲೂ ಪ್ರೋತ್ಸಾಹಧನವನ್ನು ನೀಡಬೇಕು. ಜ್ಯೋತಿ ಸಂಜೀವಿನಿ ಯೋಜನೆಯನ್ನು ನೌಕರರಿಗೂ ಜಾರಿಮಾಡಬೇಕು. 2019-20ನೇ ಸಾಲಿನಲ್ಲಿ ಕೋವಿಡ್ ಕರ್ತವ್ಯ ನಿರ್ವಹಿಸಿದ ಭತ್ಯೆಯನ್ನು ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಸಂಘದ ಜಿಲ್ಲಾಧ್ಯಕ್ಷ ಜಿ.ರಾಮು, ಪದಾಕಾರಿಗಳಾದ ಎಂ.ಎಂ.ಮಠಪತಿ, ವೆಂಕಟರಾಮರೆಡ್ಡಿ, ರಾಜೇಶ ದೇಶಪಾಂಡೆ, ನಾಗಲಿಂಗ ಅರಕೇರ, ಓಂಪ್ರಸಾದ, ಶ್ಯಾಮಸುಂದರ, ರಾಮಕೃಷ್ಣ, ಗಂಗಾಧರ, ಮಲ್ಲಪ್ಪ, ರಾಮಚಂದ್ರ, ಈರಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net