ಬಿಜೆಪಿಗೆ ಬೆಂಬಲ ಘೋಷಿಸಿದ ಎಂಇಎಸ್

IMG-20240429-WA0035.jpg
Published on


-ಕಾಂಗ್ರೆಸ್‌ಗೆ ಮತ ಹಾಕದಂತೆ ಪ್ರಮಾಣ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಲು ಬೆಳಗಾವಿ ದಕ್ಷಿಣ, ಉತ್ತರ ಹಾಗೂ ಗ್ರಾಮೀಣ ಕ್ಷೇತ್ರದಲ್ಲಿನ ಎಲ್ಲ ಮರಾಠಿ ಭಾಷಿಕರು ನಿರ್ಧರಿಸಿದ್ದೇವೆ. ಅಲ್ಲದೆ, ಚುನಾವನೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕದಂತೆ ಪ್ರಮಾಣ ಮಾಡಿದ್ದೇವೆ  ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡ, ಮಾಜಿ ಮೇಯರ್ ಶಿವಾಜಿ ಸುಂಟಕರ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯತೆ, ಹಿಂದುತ್ವ ವಿಷಯ ಬಂದಾಗ ನಾವೆಲ್ಲಾ ಭಾಷೆ, ಗಡಿ ವಿಷಯಗಳನ್ನು ಬದಿಗೊತ್ತಿ ಒಗ್ಗಟ್ಟಾಗಿ ನಿಲ್ಲುತ್ತೇವೆ. ಈ ವಿಷಯದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಹಾಗಾಗಿ ಈ ಬಾರಿ ಲೋಕಸಭೆಗೆ ಸಮಿತಿಯಿಂದ ಚುನಾವಣೆಗೆ ಸ್ಪರ್ಧಿಸುವ ಬದಲಾಗಿ ಮೋದಿ ಬೆಂಬಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಕೆಲವರು ತಮ್ಮ ಸ್ವಾರ್ಥ ಸಾಧನೆಗಾಗಿ ಯಾರೊಂದಿಗೆ ಚರ್ಚಿಸದೆ ಏಕಾಏಕಿ ಎಂಇಎಸ್ ಬೆಂಬಲಿತ ಹೆಸರಿನಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ. ಹೀಗಾಗಿ ಸ್ವಾಭಿಮಾನಿ ಮರಾಠಿಗರು, ಶಿವಾಜಿ ಮಹಾರಾಜ ಅವರ ಆರಾಧಕರು, ಹೋರಾಟಗಾರರೆಲ್ಲರೂ  ಮೋದಿ ಅವರನ್ನು ಬೆಂಬಲಿಸಿ ಮತ ಚಲಾಯಿಸಲಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net