ಮಳೆ, ಗಾಳಿಯಿಂದ ಮೆಸ್ಕಾಂಗೆ 16.45 ಕೋಟಿ ರೂ. ಅಧಿಕ ನಷ್ಟ

IMG-20240807-WA01992
Published on


ಮಂಗಳೂರು : ಗಾಳಿ, ಮಳೆಗೆ ಮೆಸ್ಕಾಂ ವ್ಯಾಪ್ತಿಯಲ್ಲಿ 10583 ವಿದ್ಯುತ್ ಕಂಬಗಳು ಧರಾಶಾಯಿಯಾಗಿದ್ದು, ಪರಿವರ್ತಕಗಳು ಹಾನಿ ಸಹಿತ ಒಟ್ಟು 16.45 ಕೋಟಿ ರೂ. ಅಧಿಕ ಮೊತ್ತದ ಆಸ್ತಿಗಳಿಗೆ ಹಾನಿಯಾಗಿದೆ.
ಏಪ್ರಿಲ್ನಿಂದ ಜೂನ್ 15ರ ಅವಧಿಯಲ್ಲಿ ಗಾಳಿ, ಮಳೆಗೆ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ
ಅತಿ ಹೆಚ್ಚು ಹಾನಿ ಸಂಭವಿಸಿದೆ. ದ.ಕ. ಜಿಲ್ಲೆಯಲ್ಲಿ 6.91 ಕೋಟಿ ರೂ. ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ 3.85 ಕೋಟಿ ರೂ. ಮೊತ್ತದ ಆಸ್ತಿಗಳಿಗೆ ಹಾನಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ 3.73 ಕೋಟಿ ರೂ. ಮತ್ತು ಶಿವಮೊಗ್ಗದಲ್ಲಿ 1.95 ಕೋಟಿ ರೂ. ಮೊತ್ತದ ಮೆಸ್ಕಾಂ ಆಸ್ತಿಗಳು ಹಾನಿಗೊಳಗಾಗಿದೆ.
ಹಾನಿಗೊಳಗಾದ ಬಹುತೇಕ ವಿದ್ಯುತ್ ಕಂಬಗಳು , ಪರಿವರ್ತಕಗಳು ಹಾಗೂ ವಿದ್ಯುತ್ ಮಾರ್ಗಗಳನ್ನು ಬದಲಾಯಿಸಿ ವಿದ್ಯುತ್ ಪೂರೈಕೆ ಸುಗಮಗೊಳಿಸಲಾಗಿದೆ. ಕೆಲವೊಂದು ಕಡೆ ದುರಸ್ತಿ ಮತ್ತು ಬದಲಾವಣೆ ಕಾರ್ಯ ಮುಂದುವರಿದಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
* ದ.ಕ.ಅತೀ ಹೆಚ್ಚು ಕಂಬಗಳಿಗೆ ಹಾನಿ.
ಮೆಸ್ಕಾಂ ವ್ಯಾಪ್ತಿಯ 4 ಜಿಲ್ಲೆಗಳಲ್ಲಿ ಹೋಲಿಸಿದರೆ ಗಾಳಿ, ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು 4227 ಕಂಬಗಳಿಗೆ
ಹಾನಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 2238, ಶಿವಮೊಗ್ಗದಲ್ಲಿ 1945, ಉಡುಪಿಯಲ್ಲಿ 2173 ಕಂಬಗಳು ಹಾನಿಗೊಳಗಾಗಿವೆ. ಹಾನಿಗೊಳಗಾಗಿರುವ 10583 ವಿದ್ಯುತ್ ಕಂಬಗಳ ಪೈಕಿ 10338 ಕಂಬಗಳನ್ನು ಬದಲಾಯಿಸಲಾಗಿದೆ.
ಮೆಸ್ಕಾಂ ವ್ಯಾಪ್ತಿಯ ದ.ಕ.- 120, ಉಡುಪಿ -6, ಶಿವಮೊಗ್ಗ- 52 , ಚಿಕ್ಕಮಗಳೂರು -2 ಒಟ್ಟು 180 ವಿದ್ಯುತ್ ಪರಿವರ್ತಕಗಳಿಗೆ ಹಾನಿಯಾಗಿವೆ.ಹಾನಿಗೊಳಗಾಗಿರುವ ಎಲ್ಲಾ 180 ವಿದ್ಯುತ್ ಪರಿವರ್ತಕಗಳನ್ನು ದುರಸ್ತಿ / ಬದಲಾಯಿಸಲಾಗಿದೆ.
4 ಜಿಲ್ಲೆಗಳಲ್ಲಿ ಒಟ್ಟು 326.58.ಕಿ.ಮೀ. ವಿದ್ಯುತ್ ಮಾರ್ಗಗಳು ಹಾನಿಗೊಂಡಿದ್ದು, 323 ಕಿ.ಮೀ. ವಿದ್ಯುತ್ ಮಾರ್ಗ ಸರಿಪಡಿಸಲಾಗಿದೆ . ಮೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಗಾಳಿ, ಮಳೆ ಲೆಕ್ಕಿಸದೆ ಅವಿರತವಾಗಿ ಶ್ರಮಿಸಿ, ಗ್ರಾಹಕರ ಸಹಕಾರದಿಂದ ವಿದ್ಯುತ್ ಪೂರೈಕೆಯಲ್ಲಿ ಆಗಿರುವ ಅಡಚಣೆಗಳನ್ನು ಸರಿಪಡಿಸುತ್ತಿದ್ದಾರೆ. ಇನ್ನೂ ಹಲವೆಡೆ ದುರಸ್ತಿ ಕಾರ್ಯ ಮುಂದುವರಿದಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
.................................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net