ಮಂಗಳೂರು: ಮೆಸ್ಕಾಂ ಉಳ್ಳಾಲ ಮತ್ತು ಕೊಣಾಜೆ ಉಪವಿಭಾಗಗಳಿಗೆ ಸಂಬಂಧಿಸಿದ ಜನ ಸಂಪರ್ಕ ಸಭೆಯು ಕೊಣಾಜೆ ಉಪವಿಭಾಗ ಕಚೇರಿಯಲ್ಲಿ ಆ.2 ರಂದು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಮೆಸ್ಕಾಂಗೆ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ. ದೂರವಾಣಿ ಕರೆಯ ಮುಖಾಂತರವೂ ಸಂಪರ್ಕಿಸಿ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 0824-2223324.