

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸದಿಂದಾಗಿ ನ. 15 ರಿಂದ 17 ರ ವರೆಗೆ ವಿವಿಧ ಸ್ಥಳಗಳಲ್ಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
15 ರಂದು ಬೆಳಗ್ಗೆ 9 ರಿಂದ ಸಾಯಂಕಾಲ 5ರ ವರೆಗೆ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾ, ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
16 ರಂದು ಬೆಳಗ್ಗೆ 9.30ರಿಂದ ಸಾಯಂಕಾಲ 5.30ರ ವರೆಗೆ ಅಜ್ಜರಕಾಡು, ಎಲ್.ಐ.ಸಿ, ಜೋಡುಕಟ್ಟೆ, ಟಿ.ಎಂ.ಎ ಪೈ ಆಸ್ಪತ್ರೆ, ಖಜಾನೆ, ತಾಲೂಕು ಪಂಚಾಯಿತಿ, ಮಿಷನ್ ಕಂಪೌಂಡ್ 1ನೇ ಮುಖ್ಯ ರಸ್ತೆ, ಮಂಜುನಾಥ ಪೆಟ್ರೋಲ್ ಪಂಪ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಪಾಮ್ಸ್ರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
17ರಂದು ಬೆಳಗ್ಗೆ 9 ರಿಂದ ಸಾಯಂಕಾಲ 5ರ ವರೆಗೆ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.