ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಿ

7 HBHB 04
ಬ್ಯಾಲಾಳ್ ಮಂಜುನಾಥ
Published on

ಹಗರಿಬೊಮ್ಮನಹಳ್ಳಿ: ರಾಜ್ಯದ ಆದಿ ಜಾಂಬವ ಮಾದಿಗ ಜನಾಂಗದ ಶೋಷಿತರ ಧ್ವನಿಯಾಗಿರುವ ಎಚ್.ಆಂಜನೇಯ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ವಿಜಯನಗರ ಜಿಲ್ಲಾ ಅಧ್ಯಕ್ಷ ಮಂಜುನಾಥ್ ಬ್ಯಾಲಾಳ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಾಲಿ ಸಚಿವರಿಗೆ ಕಡಿಮೆ ಇಲ್ಲದಂತೆ, ಜನಸೇವೆ ಮತ್ತು ರಾಜ್ಯ ಪ್ರವಾಸ ಮಾಡಿ ಜನರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷ ಸಂಘಟನೆ, ಶೋಷಿತರ ಸಂಕಷ್ಟಗಳಿಗೆ ಪರಿಹಾರ ಒದಗಿಸುವುದು, ಸರ್ಕಾರದ ಜನಪರ ಯೋಜನೆಗಳ ಪ್ರಚಾರ ಮತ್ತು ಅವುಗಳನ್ನು ಜನರಿಗೆ ತಲುಪಿಸುವುದು, ಒಳಮೀಸಲಾತಿ ಸಮೀಕ್ಷೆ ಕುರಿತು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net