

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳು ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ 2 ಹಂತವಾಗಿ ಮತಚಲಾವಣೆ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆ 2024ರ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ.
2024 ಏಪ್ರಿಲ್ 26ರಂದು ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆ 2024ರ ಪ್ರಯುಕ್ತ ಎಲ್ಲಾ ನಾಲ್ಕು ಟರ್ಮಿನಲ್ಗಳಲ್ಲಿ ಸಮಯ ವಿಸ್ತರಣೆ ಮಾಡಲಾಗಿದೆ. ನಾಗಸಂದ್ರ, ರೇಷ್ಮೆ ಸಂಸ್ಥೆ ಚಲ್ಲಘಟ್ಟ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ರಾತ್ರಿ 11.55ಕ್ಕೆ ವಿಸ್ತರಿಸಲಾಗಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು2024 ಜುಲೈ 27 ರಂದು 12.35ಕ್ಕೆ ಮಧ್ಯರಾತ್ರಿ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಕೋರಿದೆ.