ಪಾಲಿಕೆ ಕಾಂಗ್ರೆಸ್ ಸದಸ್ಯರಿಗೆ ಚಿಂತನ ಮಂಥನ ಸಮಾವೇಶ ಇಂದು

DINESH K SHETTI
Published on

ದಾವಣಗೆರೆ: ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರಿಗೆ ಚಿಂತನ ಮಂಥನ ಸಮಾವೇಶ ಹಾಗೂ ಸನ್ಮಾನ ಕಾರ್ಯಕ್ರಮ ಜ. 23 ರಂದು ನಗರದ ತೊಗಟವೀರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಕಾಂಗ್ರೆಸ್ ಮುಖಂಡರಾದ ಕೆ.ಸಿ. ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಯು.ಬಿ. ವೆಂಕಟೇಶ್, ರಘು ಆಚಾರ್, ಅಬ್ದುಲ್ ಜಬ್ಬಾರ್, ಮೋಹನ್ ಕೊಂಡಜ್ಜಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಪಾಲ್ಗೊಳ್ಳುವರು ಎಂದು ಹೇಳಿದರು.

ಮಹಾನಗರ ಪಾಲಿಕೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ ಎಲ್ಲ ಅಭ್ಯರ್ಥಿಗಳು, ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ವಾರ್ಡ್ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆ ಕುರಿತು ಚಿಂತನ-ಮಂಥನ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಪ್ರಧಾನ ಕಾರ್ಯದರ್ಶಿ ಸುಧಾ ಚನ್ನಪ್ಪಗೌಡ, ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಯೂಬ್ ಪೈಲ್ವಾನ್, ಕಿಸಾನ್ ಸೆಲ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಗಂಗಾ ಬಸವರಾಜ್, ಕಾಂಗ್ರೆಸ್ ಮುಖಂಡರಾದ ಮುಜಾಹಿದ್, ಕುಬೇರಪ್ಪ, ಪ್ರವೀಣ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net