

ಉಡುಪಿ: ರಾಷ್ಟ್ರಪತಿಯಿಂದ ಸಾಮಾನ್ಯ ನಾಗರಿಕನವರೆಗೆ ಎಲ್ಲರೂ ಪರಿಸರವಾದಿಗಳಾಗಬೇಕು. ಪ್ರಕೃತಿ ಬಗ್ಗೆ ಶಾಲಾ ಪಠ್ಯಗಳಲ್ಲಿ ಕಲಿತರೆ ಪ್ರಯೋಜನವಿಲ್ಲ. ಪರಿಸರದೊಳಗೆ ಕಲಿಯುವುದು ಅತೀ ಅವಶ್ಯವಾಗಿದೆ. ಇಲ್ಲದಿದ್ದರೆ ಯುವಜನಾಂಗ ನಿಸರ್ಗ ಸಂಬಂಧದಿಂದ ಕಳಚಿಕೊಳ್ಳುವ ಸಾಧ್ಯತೆಗಳಿವೆ ಎಂದು ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲ ಹೇಳಿದರು.
ಎಂಜಿಎಂಕಾಲೇಜಿನಲ್ಲಿ ನಡೆದ ಮುದ್ದಣ ಸಾಹಿತ್ಯೋತ್ಸವದಲ್ಲಿ ಯುವಜನತೆ ಮತ್ತು ಪರಿಸರ ಕಾಳಜಿ ಎಂಬ ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು.
ಅವಳಿ ಜಿಲ್ಲೆಗಳಲ್ಲಿ 22 ನದಿಗಳು ಹರಿಯುತ್ತಿದ್ದರೂ ಬೇಸಿಗೆ ಕಾಲದಲ್ಲಿ ನೀರಿಲ್ಲದೆ ಪರದಾಟುತ್ತಿದ್ದೇವೆ. ಯಾಂತ್ರಿಕ ಜನಾಂಗ ನಿರ್ಮಾಣವಾಗುತ್ತಿದೆ. ಆಸ್ಪತ್ರೆಯಲ್ಲೇ ಹುಟ್ಟಿ ಆಸ್ಪತ್ರೆಯಲ್ಲೇ ಬೆಳೆದು ಆಸ್ಪತ್ರೆಯಲ್ಲೆ ಸಾಯುವ ಮಕ್ಕಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. ಈ ಅಪಾಯವನ್ನು ಗ್ರಹಿಸಿ ಈಗಲೇ ಪ್ರಕೃತಿ ಉಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಈ ಸಂದರ್ಭದಲ್ಲಿ ಸಾಹಿತಿ ರುನಂದನ್ ಅವರ ತುಯ್ತವೆಲ್ಲ ನವ್ಯದತ್ತ ಅಂದತ್ತರ ಉಯ್ಯಾಲೆ ಮತ್ತು ಅದರ ಸುತ್ತ ಕೃತಿಗೆ ವಿ.ಎಂ. ಇನಾಂದಾರ್ ವಿಮರ್ಶಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷಿ$್ಮ ನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು. ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ. ದೇವಿದಾಸ ನಾಯಕ್, ಪಪೂ ಕಾಲೇಜು ಪ್ರಾಂಶುಪಾಲೆ ಮಾಲತಿದೇವಿ, ಉಪಪ್ರಾಂಶುಪಾಲ ಡಾ. ವಿಶ್ವನಾಥ ಪೈ ಎಂ. ಉಪಸ್ಥಿತರಿದ್ದರು. ಕನ್ನಡ ವಿಭಾಗ ಮುಖ್ಯಸ್ಥ ಡಾ. ಪುತ್ತಿ ವಸಂತ ಕುಮಾರ್ ಸ್ವಾಗತಿಸಿದರು. ಡಾ. ಜಗದೀಶ್ ಶೆಟ್ಟಿ ಪ್ರಸ್ತಾವನೆಗೈದರು. ರಾವೇಂದ್ರ ತುಂಗ ಕಾರ್ಯಕ್ರಮ ನಿರೂಪಿಸಿ, ಡಾ. ಕಾತ್ಯಾಯಿನಿ ಕುಂಜಿಬೆಟ್ಟು ವಂದಿಸಿದರು.