ವಿದ್ಯಾರ್ಥಿಗಳು ರಂಗಕಲೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಿ

udp-24-tulu
Published on

ಉಡುಪಿ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಕಲಿಕೆ ಉದ್ಯೋಗಕ್ಕೆ ಮಾತ್ರ ಸೀಮಿತವಾಗಬಾರದು. ರಂಗಕಲೆಗಳಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ತುಳುಚಿತ್ರ ನಟ ಪ್ರಸನ್ನ ಶೆಟ್ಟಿ ಬೈಲೂರು ಹೇಳಿದರು.

ಎಂಜಿಎಂ ಕಾಲೇಜಿನಲ್ಲಿ ತುಳು ಸಂದ ಆಶ್ರಯದಲ್ಲಿ ನಡೆದ ತುಳು ಐಸಿರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತುಳು ಭಾಷೆಗೆ ವಿಶೇಷ ಗೌರವ ಮತ್ತು ಶಕ್ತಿ ಇದೆ. ತುಳು ಭಾಷೆ ಬೆಳೆಯಬೇಕು. ಈ ಭಾಗದಲ್ಲಿ ತುಳು ಭಾಷಿಕರಿಗೆ ಹೆಚ್ಚಿನ ಉದ್ಯೋಗ ಲಭಿಸಬೇಕು ಎಂದು ಹೇಳಿದರು.

ತುಳುಕೂಟ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮುಖ್ಯ ಅತಿಥಿಗಳಾಗಿದ್ದರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷಿ$್ಮ ನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು. ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ. ದೇವಿದಾಸ ನಾಯಕ್​, ಪಪೂ ಕಾಲೇಜು ಪ್ರಾಂಶುಪಾಲೆ ಮಾಲತಿದೇವಿ, ಉಪಪ್ರಾಂಶುಪಾಲ ಡಾ. ವಿಶ್ವನಾಥ ಪೈ ಎಂ. ಉಪಸ್ಥಿತರಿದ್ದರು. ಪ್ರೊ. ಅರುಣ್​ ಕುಮಾರ್​ ಸ್ವಾಗತಿಸಿದರು. ಕನ್ನಡ ವಿಭಾಗ ಮುಖ್ಯಸ್ಥ ಡಾ. ಪುತ್ತಿ ವಸಂತ ಕುಮಾರ್​ ಪ್ರಸ್ತಾವಿಸಿದರು. ಮೇಧಾ ತಂತ್ರಿ ವಂದಿಸಿದರು. ಸುಚಿತ್​ ಕೋಟ್ಯಾನ್​ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net