ರಾಬರ್ಟ್ ಬಾಷ್ ಕನ್ನಡ ಸಾಹಿತ್ಯ ಪ್ರಶಸ್ತಿ ಪ್ರಕಟ

Poet
Published on

ಬೆಂಗಳೂರು: ಮೈಕೊ ಕನ್ನಡ ಬಳಗ ನೀಡುವ ರಾಬರ್ಟ್ ಬಾಷ್ ಕನ್ನಡ ಸಾಹಿತ್ಯ ಪ್ರಶಸ್ತಿಗೆ ಸಾಹಿತಿ ಡಾ. ದೊಡ್ಡರಂಗೇಗೌಡ ಭಾಜನರಾಗಿದ್ದಾರೆ.

ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಒಳಗೊಂಡಿದೆ. ಆ. 27ರ ಭಾನುವಾರ ಬೆಳಿಗ್ಗೆ 10.30ಕ್ಕೆ ಆನಂದರಾವ್ ವೃತ್ತದ ಬಳಿ ಇರುವ ಜಗದ್ಗುರು ರೇಣುಕಾಚಾರ್ಯ ಕಾಲೇಜು ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹೃದ್ರೋಗ ತಜ್ಞೆ ಡಾ. ವಿಜಯಲಕ್ಷ್ಮೀ ಬಾಳೆಕುಂದ್ರಿ ಸಮಾರಂಭ ಉದ್ಘಾಟಿಸಲಿದ್ದು, ಬಾಷ್ ಸಂಸ್ಥೆಯ ವಾಣಿಜ್ಯಾಧಿಕಾರಿ ಎಚ್. ಬಿ. ತೋಂಟೇಶ್ ಹಾಗೂ ಕಾರ್ಮಿಕ ಮುಖಂಡ ವಿಜೆಕೆ ನಾಯರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಳಗದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net