ಮೈಕೋ ಲೇಔಟ್ ಠಾಣೆ ಮಹಿಳಾ ಪೇದೆ ಆತ್ಮಹತ್ಯೆ

Published on

ರಾಮನಗರ: ಮಹಿಳಾ ಕಾನ್ಸ್ ಟೇಬಲ್ ಒಬ್ಬರು ತಮ್ಮ ಮನೆಯಲ್ಲಿಯೇ ನೇಣು ಬಿಗದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾರೋಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.

ಮಂಜುಳಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಕಾನ್ಸ್ ಸ್ಟೇಬಲ್ ರಾಮನಗರ ಜಿಲ್ಲೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಸ್ತುತ ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುಳಾ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net