

ಬೆಂಗಳೂರು: ಬಿಸಿಯೂಟ ನೌಕರರಿಗೆ ನೀಡುವ ಸಂಭಾವನೆಯಲ್ಲಿ ಕೇಂದ್ರದ ಪಾಲು ಹೆಚ್ಚಿಸುವಂತೆ ಮನವಿ ಮಾಡಲು ಶೀಘ್ರದಲ್ಲೇ ದೆಹಲಿಗೆ ನಿಯೋಗ ಕರೆದುಕೊಂಡು ಹೋಗುವುದಾಗಿ ಸಚಿವ ಸುರೇಶ್ಕುಮಾರ್ ತಿಳಿಸಿದ್ದಾರೆ.
ಬಿಸಿಯೂಟ ನೌಕರರ ಬೇಡಿಕೆಗಳ ಕುರಿತು ವಿವಿಧ ಸಂಘಟನೆಗಳ ಪದಾಧಿಕಾರಿ ಗಳ ಜತೆ ಗುರುವಾರ ನಡೆದ ಸಭೆ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಕೇಂದ್ರ ಸರ್ಕಾರ ನೀಡುವ ಪಾಲು ಹೆಚ್ಚಳ ಮಾಡಿದರೆ ಹೆಚ್ಚಿನ ಸಂಭಾವನೆ ಸಿಗುತ್ತದೆ. ಈ ಬಗ್ಗೆ ಮಾತನಾಡಲು ದೆಹಲಿಗೆ ನಿಯೋಗ ಕರೆದೊಯ್ಯಲಾಗುವುದು. ಬಿಸಿಯೂಟ ಸಿಬ್ಬಂದಿಗೆ ನಿವೃತ್ತಿ ನಂತರ ಒಂದಷ್ಟು ಮೊತ್ತ ಸಿಗುವಂತೆ ಮಾಡುವುದು ಹಾಗೂ ಅಪಘಾತ ವಿಮೆಗೆ ಎಲ್ಐಸಿ ಜತೆ ರ್ಚಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದರು.