ಮಿಲನಾ ಭರತ್ ರಾಷ್ಟ್ರಮಟ್ಟಕ್ಕೆ ಆಯ್ಕೆ

milana
Published on

ಮಡಿಕೇರಿ:

ರಾಜ್ಯ ಸರ್ಕಾರಿ ನೌಕರರ ರಾಷ್ಟç ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಭರತನಾಟ್ಯ, ಕೂಚುಪುಡಿ ಹಾಗೂ ಒಡಿಸ್ಸಿ ವಿಭಾಗದಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕಿಯಾಗಿರುವ ಮಿಲನಾ ಕೆ. ಭರತ್ ರಾಷ್ಟçಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಶಿವಮೊಗ್ಗದಲ್ಲಿ ಈಚೆಗೆ ನಡೆದ 2025-26ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಈ ಮೂರು ವಿಭಾಗದಲ್ಲೂ ಇವರು ಪ್ರಶಸ್ತಿ ಗಳಿಸಿದ್ದಾರೆ. ಗುರು ವಿದ್ವಾನ್ ರಾಜೇಶ್ ಆಚಾರ್ಯ ಅವರ ಮಾರ್ಗದರ್ಶನದಲ್ಲಿ ಮಿಲನಾ ನೃತ್ಯ ಪ್ರದರ್ಶಿಸಿದ್ದು, ವಿದುಷಿ ಕಾವ್ಯಶ್ರೀ ಕಪಿಲ್ ನೃತ್ಯದ ವಸ್ತ್ರ ವಿನ್ಯಾಸ ಮಾಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net