ಕಾವೇರಿ ಮಾತೆಗೆ ಹಾಲಿನ ಅಭಿಷೇಕ

19-06-25--krs2 (2)
Published on

ಕೆ.ಆರ್.ಸಾಗರ: ಕೆ.ಆರ್.ಸಾಗರದ ಬೃಂದಾವನದ ಪ್ರವೇಶ ದ್ವಾರದ ಬಳಿ ವ್ಯಾಪಾರ ಮಾಡುವ ಸರ್ ಎಂ.ವಿಶ್ವೇಶ್ವರಯ್ಯ ರಸ್ತೆ ಬದಿ ವ್ಯಾಪಾರಸ್ಥರ ಸಂಘದಿಂದ ಗುರುವಾರ ಬೆಳಗ್ಗೆ ಬೃಂದಾವನದಲ್ಲಿರುವ ಕಾವೇರಿ ಮಾತೆ ಪ್ರತಿಮೆಗೆ ಹಾಲಿನ ಅಭಿಷೇಕ-ವಿಶೇಷ ಪೂಜೆ ಸಲ್ಲಿಸಲಾಯಿತು.

ಸತತ 20ನೇ ವರ್ಷದ ಅಂಗವಾಗಿ ಬೃಂದಾವನದಲ್ಲಿ ಕಾವೇರಿ ಮಾತೆಯ ಪ್ರತಿಮೆಗೆ ಅರ್ಚಕ ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಅರ್ಚಕರ ತಂಡದಿಂದ ಪೂಜಾ ಕೈಂಕರ್ಯ ನಡೆಯಿತು.

ಸರ್ ಎಂ.ವಿಶ್ವೇಶ್ವರಯ್ಯ ರಸ್ತೆ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಬೆಳಗ್ಗೆ 10 ಗಂಟೆಯಿಂದ 10 ಲೀಟರ್ ಹಾಲಿನ ಅಭಿಷೇಕ, ಮೊಸರು, ಪಂಚಾಮೃತ ಅಭಿಷೇಕ ಮಾಡಲಾಯಿತು. ನಂತರ ಕಾವೇರಿ ಮಾತೆಯನ್ನು ಹೂಗಳಿಂದ ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.

ಗ್ರಾ.ಪಂ ಉಪಾಧ್ಯಕ್ಷ ಪಾಪಣ್ಣ, ಸದಸ್ಯ ರವಿಕುಮಾರ್, ಸರ್ ಎಂ.ವಿಶ್ವೇಶ್ವರಯ್ಯ ರಸ್ತೆ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ನಾರಾಯಣ, ಉಪಾಧ್ಯಕ್ಷ ರಫೀಕ್, ಹಿರಿಯ ಸದಸ್ಯರಾದ ಪುರುಷೋತ್ತಮ್, ರವೀಶ್, ಶ್ರೀನಿವಾಸ್, ಕೃಷ್ಣ, ಮೋಹನ, ಪ್ರಮೋದ, ಪಳನಿಯಮ್ಮ ಸೇರಿದಂತೆ ನೂರಾರು ರಸ್ತೆ ಬದಿ ವ್ಯಾಪಾರಿಗಳು, ಕುಟುಂಬ ವರ್ಗದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net