

ಧಾರವಾಡ: ಹಾಲು ಉತ್ಪಾದನಾ ವೆಚ್ಚ ಹೆಚ್ಚಳದಿಂದ ಕಂಗೆಟ್ಟ ರೈತರ ನೆರವಿಗೆ ನಿಂತ ರಾಜ್ಯ ಸರ್ಕಾರ ನಂದಿನಿ ಹಾಲಿನ ಮಾರಾಟ ದರವನ್ನು ಹೆಚ್ಚಳ ಮಾಡಿರುವುದು ಸ್ವಾಗತಾರ್ಹ ಎಂದು ಧಾರವಾಡ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ಶಂಕರ ವೀರಪ್ಪ ಮುಗದ ತಿಳಿಸಿದ್ದಾರೆ.
ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಎಂಎ್ ಅಧ್ಯಕ್ಷ ಹಾಗೂ ನಿರ್ದೇಶಕರು ಮತ್ತು ಎಲ್ಲ ಹಾಲು ಒಕ್ಕೂಟಗಳ ಅಧ್ಯಕ್ಷರ ಸಭೆ ಜರುಗಿಸಿ ನಂದಿನಿ ಹಾಲಿನ ಮಾರಾಟ ದರವನ್ನು ಆ. 1ರಿಂದ ಅನ್ವಯವಾಗುವಂತೆ ಪ್ರತೀ ಲೀಟರ್‌ಗೆ 3 ರೂ. ಹೆಚ್ಚಿಸಿರುವುದು ಸ್ವಾಗತಾರ್ಹ. ಹೆಚ್ಚಳದಿಂದ ದೊರೆಯುವ ಪೂರ್ಣ ಮೊತ್ತವನ್ನು ಹಾಲು ಉತ್ಪಾದಕ ರೈತರಿಗೆ ವರ್ಗಾಯಿಸಲು ಕೈಗೊಂಡಿರುವ ನಿರ್ಣಯ ಸ್ವಾಗತಾರ್ಹ ಎಂದು ಮುಗದ ತಿಳಿಸಿದ್ದಾರೆ.