ಕೋಡಿ ಕನ್ಯಾಣ ಹಾಲು ಉತ್ಪಾದಕರ ಮಹಾಸಭೆ

milk
ಕೋಡಿ ಕನ್ಯಾಣ ಹಾಲು ಉತ್ಪಾದಕರ ಸಂಘದ ಮಹಾಸಭೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷ ಪ್ರಭಾಕರ ಮೆಂಡನ್, ಒಕ್ಕೂಟ ವಿಸ್ತರಣಾಧಿಕಾರಿ ಸರಸ್ವತಿ, ನಿರ್ದೇಶಕ ರಘುರಾಮ ಮೆಂಡನ್ ಮತ್ತಿತರರು ಇದ್ದರು.
Published on

ಕೋಟ: ಕೋಡಿ ಕನ್ಯಾಣ ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆಯಿತು.
ಸಂಘದ ಅಧ್ಯಕ್ಷ ಪ್ರಭಾಕರ ಮೆಂಡನ್ ಅಧ್ಯಕ್ಷತೆ ವಹಿಸಿ, ಸಂಘ 2,24,502 ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.20 ಡಿವಿಡೆಂಡ್ ನೀಡಲಾಗುವುದು ಎಂದು ಹೇಳಿದರು.

ಒಕ್ಕೂಟದಿಂದ ಸಿಗುವ ಸೌಲಭ್ಯ ಹಾಗೂ ಹೈನುಗಾರಿಕೆ ಅಭಿವೃದ್ಧಿ ಬಗ್ಗೆ ಒಕ್ಕೂಟ ವಿಸ್ತರಣಾಧಿಕಾರಿ ಸರಸ್ವತಿ ಮಾಹಿತಿ ನೀಡಿದರು.
ಉಪಾಧ್ಯಕ್ಷೆ ಸುಮತಿ ಪಿ., ನಿರ್ದೇಶಕರಾದ ಸದಾಶಿವ ಐತಾಳ್, ಹರ್ಷ ಕೆ, ಕೆ.ಲಕ್ಷ್ಮೀ, ಕೆ.ವಿಶ್ವನಾಥ ಪೂಜಾರಿ, ಪಾರ್ವತಿ ಕೋಟ್ಯಾನ್, ವನಜಾ, ನೇತ್ರಾವತಿ, ಕಾವೇರಿ ಉಪಸ್ಥಿತರಿದ್ದರು. ನಿರ್ದೇಶಕ ರಘುರಾಮ ಮೆಂಡನ್ ವಂದಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಉಮೇಶ್ ಐತಾಳ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net