ನಿಯಂತ್ರಣ ತಪ್ಪಿ ಮಗುಚಿಬಿದ್ದ ಹಾಲಿನ ವಾಹನ

24-MAY-GPT-3.
ಗುಂಡ್ಲುಪೇಟೆ ತಾಲೂಕಿನ ಮಾಡ್ರಹಳ್ಳಿ ಸಮೀಪ ಅಪಘಾತಕ್ಕೊಳಗಾದ ಹಾಲಿನ ವಾಹನ.
Published on

ಗುಂಡ್ಲುಪೇಟೆ: ಚಾಲಕನ ನಿಯಂತ್ರಣ ತಪ್ಪಿ ಹಾಲು ಸಾಗಿಸುತ್ತಿದ್ದ ಟೆಂಪೋ ಅಪಘಾತಕ್ಕೀಡಾದ ಘಟನೆ ತಾಲೂಕಿನ ಮಾಡ್ರಹಳ್ಳಿ ಸಮೀಪ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಶುಕ್ರವಾರ ಬೇಗೂರಿಗೆ ಹಾಲು ಪೂರೈಸಿ ಮಾಡ್ರಹಳ್ಳಿ ಸಮೀಪ ವಾಪಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ತಡರಾತ್ರಿಯಲ್ಲಿ ನಡೆದ ಘಟನೆಯಲ್ಲಿ ಟೆಂಪೋಗೆ ಅಳವಡಿಸಿರುವ ಕಂಟೈನರ್ ಕಳಚಿಬಿದೆ. ಈ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನಗಳ ಸಂಚಾರ ಕಡಿಮೆ ಇದ್ದುದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net