

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಕಣಕಟ್ಟೆ ಹೋಬಳಿಯ ಜಯಚಾಮರಾಜಪುರ ಗ್ರಾಮದ ವ್ಯವಸಾಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಬುಧವಾರದಿಂದ ರಾಗಿ ಖರೀದಿ ಕೇಂದ್ರ ಆರಂಭಗೊಂಡಿದೆ.
ರೈತರು ಸರತಿ ಸಾಲಿನಲ್ಲಿ ನಿಂತು ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಂಡರು.
ಕರ್ನಾಟಕ ಸಹಕಾರ ಮಾರಾಟ ಮಂಡಳಿ ನಿಗಮದ ವ್ಯವಸ್ಥಾಪಕ ಸಾಗರ್ ಒಂದು ಎಕರೆಗೆ 10 ಕ್ವಿಂಟಾಲ್ ಹಾಗೂ ಎರಡು ಅದಕ್ಕಿಂತ ಹೆಚ್ಚು ಜಮೀನು ಹೊಂದಿದ್ದ, ರೈತರಿಗೆ ಗರಿಷ್ಠ 20 ಕ್ವಿಂಟಾಲ್ ರಾಗಿ ಖರೀದಿಸುವುದಾಗಿ ತಿಳಿಸಿದರು.
ರೈತರು ನೋಂದಾಯಿಸಿಕೊಳ್ಳಲು ಆಧಾರ್ ಕಾರ್ಡ್, ಎಫ್‌ಐಡಿ, ಮೊಬೈಲ್ ಸಂಖ್ಯೆ ನೀಡಬೇಕು ಎಂದು ತಿಳಿಸಿದರು.
ಸರತಿ ಸಾಲಿನಲ್ಲಿ ನಿಂತಿದ್ದ ರೈತರು ಶಾಮಿಯಾನ, ಕುಡಿಯುವ ನೀರಿನ ವ್ಯವಸ್ಥೆ, ಶೌಚಗೃಹ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದರು.