ವಿಜಯವಾಣಿ ಸುದ್ದಿಜಾಲ ಧಾರವಾಡ.ಕೃಷಿ ಇಲಾಖೆಯಿಂದ ಸಿರಿಧಾನ್ಯಗಳ ಜಾಗೃತಿ ನಡಿಗೆಯನ್ನು ನಗರದಲ್ಲಿ ಡಿ. 5ರಂದು ಬೆಳಗ್ಗೆ 7 ಗಂಟೆಗೆ ಆಯೋಜಿಸಲಾಗಿದೆ. ಕಲಾಭವನದಿಂದ ಹೊರಡುವ ನಡಿಗೆಯು ಜ್ಯುಬಿಲಿ ವೃತ್ತದ ಮೂಲಕ ಕರ್ನಾಟಕ ಕಾಲೇಜಿನವರೆಗೆ ಸಂಚರಿಸಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ರಾಜಶೇಖರ ಅಣಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.