ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Thief
Published on

ಬೆಳಗಾವಿ: ರಾಮತೀರ್ಥ ನಗರದ ಬ್ಲಾಕ್ ನಂ.456ರಲ್ಲಿ ಮಂಗಳವಾರ ಸಂಜೆ ಕಳ್ಳತನವಾಗಿದೆ. ಮಂಜುನಾಥ ಚಿಕ್ಕಮಠ ಎಂಬುವರ ಮನೆಗೆ ನುಗ್ಗಿದ ಕಳ್ಳರು, 12.90 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 25 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ.

ಮನೆಯವರೆಲ್ಲ ಊರಿಗೆ ಹೋಗಿದ್ದಾಗ ಕಳ್ಳರು ಕೈಚಳಕ ತೋರಿದ್ದಾರೆ. ಸಂಜೆ 6ರಿಂದ 8 ಗಂಟೆ ಅವಧಿಯಲ್ಲಿ ಕಳ್ಳತನ ಆಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಾಳಮಾರುತಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net