ಮಿನಿ ಲಾರಿ ಹರಿದು ಇಬ್ಬರ ದುರ್ಮರಣ

Crime Logo
Published on

ಮೈಸೂರು: ಮೈಸೂರು-ಹುಣಸೂರು ರಸ್ತೆಯ ಬೆಳವಾಡಿ ಗೇಟ್ ಬಳಿ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಮಿನಿ ಲಾರಿ ಹರಿದು ಇಬ್ಬರು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿದ್ದಾರೆ.

ನಾಗವಾಲ ನಿವಾಸಿ ಮರಿಯಪ್ಪ (58), ಮೂಲತಃ ಉತ್ತರ ಪ್ರದೇಶದ ನಿವಾಸಿಯಾಗಿದ್ದು ಹೂಟಗಳ್ಳಿಯಲ್ಲಿ ವಾಸವಿರುವ ಬಾಬುರಾಮ್(55) ಮೃತರು. ಮಿನಿ ಲಾರಿ ಚಾಲಕ ಪಿರಿಯಾಪಟ್ಟಣದ ಸುಬ್ರಹ್ಮಣ್ಯನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಇಬ್ಬರು ಇಲವಾಲದ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಗಳಾಗಿದ್ದು ಅನಾರೋಗ್ಯ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ನೇಹಿತನ ಆರೋಗ್ಯ ವಿಚಾರಿಸಿ ಇಲವಾಲಕ್ಕೆ ವಾಪಸಾಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಇಬ್ಬರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ವೇಗವಾಗಿ ಬರುತ್ತಿದ್ದ ಮಿನಿ ಲಾರಿ ಇಬ್ಬರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿವಿ ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net