

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಮದುವೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ವೇಳೆ ತಾಳುಬೆಟ್ಟದ 4ನೇ ತಿರುವಿನಲ್ಲಿ ಬ್ರೇಕ್ ವಿಫಲಗೊಂಡ ಪರಿಣಾಮ ಮಿನಿ ಬಸ್ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಮ.ಬೆಟ್ಟದಲ್ಲಿ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹಕ್ಕೆ ಮಂಡ್ಯ ಜಿಲ್ಲೆಯ ಮದ್ದೂರಿನಿಂದ 30 ಜನರು ಬಸ್‌ನಲ್ಲಿ ಆಗಮಿಸಿದ್ದರು. ಮದುವೆ ಮುಗಿದ ಬಳಿಕ ಊರಿಗೆ ಹಿಂದಿರುಗುತ್ತಿದ್ದರು.
ಈ ವೇಳೆ ಬ್ರೇಕ್ ವಿಫಲವಾದ ಪರಿಣಾಮ 4ನೇ ತಿರುವಿನಲ್ಲಿ ಬಸ್ ತಡೆಗೋಡೆ ಡಿಕ್ಕಿ ಹೊಡೆದು ಅರಣ್ಯ ಪ್ರದೇಶದತ್ತ ನುಗ್ಗಿದೆ. ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಇನ್ಸ್‌ಪೆಕ್ಟರ್ ಜಗದೀಶ್ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಕ್ರೇನ್ ಮೂಲಕ ಬಸ್ ಅನ್ನು ಹೊರ ತರಲಾಯಿತು. ಜನರು ಮತ್ತೊಂದು ಬಸ್ಸಿನಲ್ಲಿ ಊರಿಗೆ ತೆರಳಿದರು.