ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನು ಆಟೋ ರಿಕ್ಷಾ ಕನಿಷ್ಠ ಪ್ರಯಾಣ ದರ 35 ರೂ.

AUTO JPG
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳ ಪ್ರಯಾಣ ದರವನ್ನು ಡಿ.1ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಆದೇಶ ಹೊರಡಿಸಿದೆ.

ಅದರಂತೆ ಕನಿಷ್ಠ ದರ ಮೊದಲ 1.5 ಕಿ.ಮೀ.ಗೆ 35 ರೂಪಾಯಿ, ನಂತರದ ಪ್ರತಿ ಕಿ.ಮೀ.ಗೆ 20 ರೂ. ನಿಗದಿ ಮಾಡಲಾಗಿದೆ. ಕಾಯುವ ದರ ಮೊದಲ 15 ನಿಮಿಷ ಉಚಿತ, ನಂತರದ 15 ನಿಮಿಷದವರೆಗೆ 5 ರೂ. ನಿಗದಿಯಾಗಿದೆ.

ರಾತ್ರಿ 10 ಗಂಟೆಯಿಂದ ಬೆಳಗ್ಗಿನ 5ರವರೆಗಿನ ಪ್ರಯಾಣಕ್ಕೆ ಒಂದೂವರೆ ಪಟ್ಟು ದರ ಪಡೆಯಲು ಅವಕಾಶವಿದೆ ಎಂದು ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net