

ದೇವದುರ್ಗ: ಅಕ್ಷರ ದಾಸೋಹ ಯೋಜನೆಯ ಮುಖ್ಯ ಅಡುಗೆದಾರರು, ಸಹಾಯಕಿಯರಿಗೆ ಸೇವಾ ಭದ್ರತೆ ಒಗಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮಾ.4ರಂದು ಬೆಂಗಳೂರು ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಬಿಸಿಯೂಟ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಮರಿಯಮ್ಮ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನಿಷ್ಠ ವೇತನ, ಬಜೆಟ್‌ನಲ್ಲಿ ವೇತನ ಹೆಚ್ಚಳ ಮಾಡಬೇಕು.
ಸಾದಿಲ್ವಾರ ಜಂಟಿ ಖಾತೆ ಬದಲಾವಣೆ ಮಾಡಬೇಕು. ಬೇಸಿಗೆಯಲ್ಲಿ ಕೆಲಸ ಮಾಡಿದವರಿಗೆ ವೇತನ ಬಿಡುಗಡೆ ಮಾಡಬೇಕು, ಬಿಸಿಯೂಟ ಯೋಜನೆ ಖಾಸಗೀಕರಣ ಕೈಬಿಡಬೇಕು ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ತಿಳಿಸಿದರು.