

ಉಡುಪಿ: ಪೆರಂಪಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಸ್ಥಳಕ್ಕೆ ಬುಧವಾರ ರಾತ್ರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 2 ಲಾರಿ ಸಮೇತ 3 ಮೆಟ್ರಿಕ್ ಟನ್ ಮರಳನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ ತಾಲೂಕು ಪೆರಂಪಳ್ಳಿ ಪರಿಸರದಲ್ಲಿ ಸ್ವರ್ಣ ನದಿಯಲ್ಲಿ ಅನಧಿಕೃತವಾಗಿ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ದೊರೆತ ಮಾಹಿತಿ ಮೇರೆಗೆ ಭೂ ವಿಜ್ಞಾನಿ ಗೌತಮ್ ರಾತ್ರಿ 10 ಗಂಟೆಗೆ ದಾಳಿ ನಡೆಸಿದ್ದರು. ಕಾರ್ಯಾಚರಣೆಯಲ್ಲಿ ವಾಹನ ಚಾಲಕ ಯೋಗೇಶ್ವರ್ ಶೆಟ್ಟಿಗಾರ್ ಸಹಕರಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದು, ಕಾನೂನು ಪ್ರಕ್ರಿಯೆ ಮುಗಿಯುವವರೆಗೆ ಖನಿಜ ಸಹಿತ ವಶಪಡಿಸಿಕೊಂಡಿರುವ ವಾಹನಗಳನ್ನು ಮಣಿಪಾಲ ಪೊಲೀಸ್ ಠಾಣೆ ಸುಪರ್ದಿಗೆ ವಹಿಸಲಾಗಿದೆ.