ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕಾಮಗಾರಿ ವೀಕ್ಷಿಸಿದ ಸಚಿವ

minister
Published on

ಮಡಿಕೇರಿ:

ಮಡಿಕೇರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ತಡೆಗೋಡೆಯ ದುರಸ್ತಿ ಕಾರ್ಯವನ್ನು ಈ ವರ್ಷದ ಏಪ್ರಿಲ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು Àಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಶನಿವಾರ ಜಿಲ್ಲಾ ಕೇಂದ್ರ ಮಡಿಕೇರಿಯ ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ಕಾಮಗಾರಿ ವೀಕ್ಷಣೆ ನಂತರ ಸಂಬAಧಪಟ್ಟ ಎಂಜಿನಿಯರ್ ಅವರಿಂದ ಮಾಹಿತಿ ಪಡೆದು ಮಾತನಾಡಿದರು.

ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ಕಡೆಗೆ ತೆರಳುವ ರಸ್ತೆಯ ಬಲಭಾಗದಲ್ಲಿ ಕೆಲ ವರ್ಷಗಳ ಹಿಂದೆ ಜಿಲ್ಲಾಡಳಿತ ಭವನದ ಸುರಕ್ಷತೆಗಾಗಿ ತಡೆಗೋಡೆ ನಿರ್ಮಿಸಲಾಗಿತ್ತು. ಇದು ನಂತರದ ವರ್ಷದ ಭಾರಿ ಮಳೆಯ ಸಂದರ್ಭ ಕುಸಿತಕ್ಕೆ ಒಳಗಾಗುವ ಅಪಾಯ ಎದುರಿಸಿದ ಹಿನ್ನೆಲೆ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ತಡೆಗೋಡೆಯನ್ನು ಎರಡು ಹಂತಗಳಲ್ಲಿ ಮೆಟ್ಟಿಲಿನ ಮಾದರಿಯಲ್ಲಿ ದುರಸ್ತಿ ಪಡಿಸಲಾಗುತ್ತದೆ. ಈ ಹಿಂದಿನ ತಡೆಗೋಡೆಯ ಅರ್ಧ ಭಾಗವನ್ನು ಅದು ಇರುವ ಯಥಾಸ್ಥಿತಿಯಲ್ಲಿ ಗಟ್ಟಿಗೊಳಿಸಿ, ಅದರ ಮೇಲೆ ಕಾಂಕ್ರೀಟ್ ಹಾಕಲಾಗುತ್ತದೆ. ಬಳಿಕ ಮತ್ತೊಂದು ಹಂತವನ್ನು 45 ಡಿಗ್ರಿ ಕೋನದಲ್ಲಿ ತಡೆಗೋಡೆ ನಿರ್ಮಿಸಿ ಬಲ ಪಡಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.

ಲೋಕೋಪಯೋಗಿ ಇಲಾಖಾ ಎಂಜಿನಿಯರ್‌ಗಳೊAದಿಗೆ ತಡೆಗೋಡೆಯ ದುರಸ್ತಿ ಕಾರ್ಯ ಮತ್ತು ಪ್ರಸ್ತುತ ಪರಿಸ್ಥಿತಿಗಳನ್ನು ಪರಿಶೀಲಿಸಿದರು.

ಈ ಸಂದರ್ಭ ಸಂಬAಧಪಟ್ಟ ಎಂಜಿನಿಯರ್‌ಗಳು ಸಚಿವರಿಗೆ ಮಾಹಿತಿ ನೀಡಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಶಾಸಕ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಎಂಜಿನಿಯರ್ ಕೆ.ಎನ್. ನಳಿನಿ, ಕಾರ್ಯಪಾಲಕ ಎಂಜಿನಿಯರ್ ಎಂ.ಪಿ. ಮುತ್ತುರಾಜು, ಪ್ರಮುಖರಾದ ಚಂದ್ರಮೌಳಿ, ಟಿ.ಪಿ. ರಮೇಶ್, ತೆನ್ನೀರ ಮೈನಾ, ಕೆ.ಜಿ. ಪೀಟರ್, ಅಂಬೆಕಲ್ಲು ನವೀನ್, ಪ್ರಕಾಶ್ ಆಚಾರ್ಯ, ಯಾಕೂಬ್ ಸೇರಿದಂತೆ ಪ್ರಮುಖರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net