ಮೀನುಗಾರಿಕೆ ಕೊಂಡಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲು ಸಿಎಂಗೆ ಮನವಿ

IMG-20220914-WA0099
Published on

ಮಂಗಳೂರು : ಕರಾವಳಿ ಪ್ರದೇಶದ ಮೀನುಗಾರಿಕೆ ಕೊಂಡಿ ರಸ್ತೆ ಅಭಿವೃದ್ಧಿಗೆ 79.22ಕೋಟಿ ರೂ. ಮತ್ತು ಜನ ಸಂಚಾರಕ್ಕೆ
7 ಬಾರ್ಜ್‌ಗಳ ನಿರ್ಮಾಣಕ್ಕೆ 6.90 ಕೋಟಿ ರೂ. ಅನುದಾನ ಬಿಡುಗಡೆಗೊಳಿಸುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ದ.ಕ., ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಸಚಿವರ ಜತೆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net