ಸಚಿವ ಅಶ್ವತ್ಥನಾರಾಯಣ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

16 smg 2a
Published on

ಶಿವಮೊಗ್ಗ: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಹೊಡಿ, ಬಡಿ, ಕಡಿ ಎಂಬುದು ಬಿಜೆಪಿ ಸಂಸ್ಕೃತಿಯಾಗಿದ್ದು ಸಚಿವ ಅಶ್ವತ್ಥನಾರಾಯಣ್ ಅವರನ್ನು ಸಂಪುಟದಿಂದ ತಕ್ಷಣವೇ ವಜಾ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶಿವಪ್ಪ ನಾಯಕ ವೃತ್ತದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಗಿರೀಶ್ ನೇತೃತ್ವದಲ್ಲಿ ಕಾರ್ಯಕರ್ತರು ಸಚಿವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ವ ಜನಾಂಗದ ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದಾರೆ. ಅವರ ವಿರುದ್ಧ ನಾಲಿಗೆ ಹರಿಬಿಟ್ಟಿಲ್ಲದೆ, ದುರಹಂಕಾರಿ ಹೇಳಿಕೆ ನೀಡಿದ್ದಾರೆ. ಇದು ಅವರ ಹೊಡಿ-ಬಡಿ ಸಂಸ್ಕೃತಿಗೆ ಸಾಕ್ಷಿಯಾಗಿದೆ. ಸಚಿವ ಅಶ್ವತ್ಥನಾರಾಯಣ್ ನೀಡಿದ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗಾಗಲಿ ಅಥವಾ ಕಾರ್ಯಕರ್ತರಿಗಾಗಲಿ ಆತಂಕ, ಆಶ್ಚರ್ಯವಾಗಿಲ್ಲ. ರಾಷ್ಟ್ರಪಿತ ಗಾಂಧೀಜಿ ಹತ್ಯೆ ಮಾಡಿದವರನ್ನೇ ಆರಾಧಿಸುತ್ತಿರುವ ಬಿಜೆಪಿ ನಾಯಕರಿಂದ ಇಂತಹ ಹೇಳಿಕೆಯಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಮಾಜಿ ಎಂಎಲ್‌ಸಿ ಆರ್.ಪ್ರಸನ್‌ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಆರ್.ಕಿರಣ್, ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷಾ, ಮಹಾನಗರ ಪಾಲಿಕೆ ಪ್ರತಿಪಕ್ಷದ ನಾಯಕಿ ರೇಖಾ ರಂಗನಾಥ್, ಬ್ಲಾಕ್ ಅಧ್ಯಕ್ಷರಾದ ಬಿ.ಲೋಕೇಶ್, ಎಸ್.ಕುಮಾರೇಶ್, ಪ್ರಮುಖರಾದ ಮಧು ಉಪ್ಪರಕೇರಿ, ತಂಗರಾಜ್, ಎಂ.ರಾಕೇಶ್, ಸಂದೀಪ್, ಸುಂದರ್‌ರಾಜ್, ಇರ್ಫಾನ್, ಕೆ.ಎಲ್.ಪವನ್, ನದೀಂ ಮದರಿಪಾಳ್ಯ, ಆದಿಲ್ ಭಾಷಾ, ಮಸ್ತಾನ್, ಹಯಾದ್, ಮಧು ಸಿಗೆಹಟ್ಟಿ, ಅಜಿತ್, ಪೂರ್ವಿಕ್, ವತನ್‌ಲಾಲ್ ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net