ಸಚಿವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ದೂರು

17 smg 2
Published on

ಶಿವಮೊಗ್ಗ: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮುಗಿಸಿ ಬಿಡಬೇಕೆಂದು ಬಹಿರಂಗವಾಗಿ ಹತ್ಯೆಗೆ ಪ್ರಚೋದನೆ ನೀಡಿದ್ದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್‌ಕುಮಾರ್ ಶುಕ್ರವಾರ ಜಯನಗರ ಠಾಣೆಗೆ ದೂರು ನೀಡಿದರು.

ಮಂಡ್ಯ ಜಿಲ್ಲೆಯ ಸಾತನೂರು ಗ್ರಾಮದ ಕಂಬದ ನರಸಿಂಹ ದೇವಸ್ಥಾನದ ಆವರಣದಲ್ಲಿ ಫೆ.13ರಂದು ಬೆಳಗ್ಗೆ 11.35ಕ್ಕೆ ಬಿಜೆಪಿ ಮಹಾಶಕ್ತಿ ಕೇಂದ್ರ ಸಭೆಯಲ್ಲಿ ಸಚಿವ ಅಶ್ವತ್ಥನಾರಾಯಣ ಅವರು ಸಿದ್ದರಾಮಯ್ಯ ಅವರ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಹಾಗಾಗಿ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಿ ಬಂಧಿಸಬೇಕೆಂದು ದೂರು ನೀಡಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ.ಗಿರೀಶ್, ಯುವ ಕಾಂಗ್ರೆಸ್ ಪ್ರಮುಖರಾದ ಬಿ.ಲೋಕೇಶ್, ಎಸ್.ಕುಮರೇಶ್, ಎಂ.ರಾಕೇಶ್, ಎಂ.ರಾಹುಲ್, ಆದಿಲ್ ಭಾಷಾ, ನದೀಂ, ಸಚಿನ್ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net