

ಬೆಳಗಾವಿ: ಉತ್ತರ ಭಾರತದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದಂತೆ ದಕ್ಷಿಣ ಭಾರತದ ಕರ್ನಾಟಕದಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಸುವರ್ಣ ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ರಾಮಮಂದಿರ ನಿರ್ಮಾಣ ಕುರಿತು ಮುಂದಿನ ಬಜೆಟ್ನಲ್ಲಿ ಘೋಷಣೆ ಮಾಡಲಾಗುವುದು. ಅಲ್ಲದೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಬಂದು ಸ್ಥಳ ಪರಿಶೀಲನೆ ಮಾಡಲಿದ್ದಾರೆ ಎಂದರು.