

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಭಾನುವಾರ ಏರ್ಪಡಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಡೋಲು ಬಾರಿಸುವ ಮೂಲಕ ಎಲ್ಲರ ಗಮನ ಸೆಳೆದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಅಂಬೇಡ್ಕರ್ ಕುರಿತ ಗೀತೆಯನ್ನು ಜಾನಪದ ಗಾಯಕರು ಪ್ರಸ್ತುತಪಡಿಸಿದರು. ಈ ಸಂದರ್ಭದಲ್ಲಿ ಸಚಿವ ಸಂತೋಷ ಲಾಡ್ ಅವರು ಹಾಡಿನ ಲಯಕ್ಕೆ ತಕ್ಕಂತೆ ಡೋಲು ಬಾರಿಸಿದ್ದು ವಿಶೇಷವಾಗಿತ್ತು. ಸಚಿವರ ಸಂಗೀತಾಸಕ್ತಿಗೆ ಸಭಿಕರು ಚಪ್ಪಾಳೆ ತಟ್ಟಿ ಪ್ರಶಂಸೆ ವ್ಯಕ್ತಪಡಿಸಿದರು.
ಹುಡಾ ಅಧ್ಯಕ್ಷ ಶಾಕೀರ ಸನದಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಎಸ್.ಆರ್.ಪಾಟೀಲ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಪಂ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಡಾ. ಲೋಹಿತ ನಾಯ್ಕರ, ದೇವರಾಜ ಕಂಬಳಿ, ರಾಜೇಶ್ವರಿ ಸಾಲಗಟ್ಟಿ, ತವನಪ್ಪ ಅಷ್ಟಗಿ, ರಮೇಶ ನಲ್ವಡಿ, ಸಮಾಜದ ಮುಖಂಡರು, ಇತರರು ಇದ್ದರು.