‘ಕೈ’ ಕಡೆ ಕಾಲಿಡಲ್ಲ,ಸಚಿವ ಬಿ.ಸಿ.ಪಾಟೀಲ್

KDP (7)888
Published on

ಚಿತ್ರದುರ್ಗ: ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳು ಸಿಗುತ್ತಿಲ್ಲ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷಕ್ಕೆ ಬರುವಂತೆ ಅರ್ಜಿ ಆಹ್ವಾನಿಸಿದ್ದು, ಪುನಃ ಮರಳುವ ಪ್ರಶ್ನೆಯೇ ಇಲ್ಲ. ಈಗಾಗಲೇ ಅದನ್ನು ತಿರಸ್ಕರಿಸಿದ್ದಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಬಿಜೆಪಿಗೆ ಬಂದಾಗಿದೆ, ಇಲ್ಲಿಯೇ ಉಳಿಯುತ್ತೇವೆ. 2023ರಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ. ರಾಜ್ಯ, ರಾಷ್ಟ್ರಮಟ್ಟದಲ್ಲಿ ಈಗಾಗಲೇ ಸರ್ವೇ ನಡೆಯುತ್ತಿದ್ದು, ಯಾರು ಗೆಲುವು ಸಾಧಿಸಬಲ್ಲರು ಅಂಥವರಿಗೆ ಟಿಕೆಟ್ ದೊರೆಯಲಿದೆ ಎಂದು ತಿಳಿಸಿದರು.

ಮನವಿ ಸಲ್ಲಿಕೆ

ಬೆಳಗಟ್ಟ ಗ್ರಾ.ಪಂ.ನಲ್ಲಿ 15ನೇ ಹಣಕಾಸಿನ ಯೋಜನೆಯ ಸರ್ಕಾರಿ ಅನುದಾನವನ್ನು ಪಿಡಿಒ ಹಾಗೂ ಅಧ್ಯಕ್ಷರು ದುರುಪಯೋಗ ಪಡಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಸಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಪ್ರಕಾರ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯ ಎಂ.ಎಸ್.ಗಿರೀಶ್ ಸಚಿವರಿಗೆ ಮನವಿ ಸಲ್ಲಿಸಿದರು.

ಶಾಸಕ ರೇಣುಕಾಚಾರ್ಯ ತಮ್ಮನ ಪುತ್ರನ ಸಾವು ದುರ್ದೈವದ ಸಂಗತಿ. ಈಗಾಗಲೇ ಕುಟುಂಬದ ಜೊತೆ ಮಾತನಾಡಿದ್ದು,

ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ದುರ್ಘಟನೆ ನಡೆಯಬಾರದಿತ್ತು, ನನಗೂ ನೋವುಂಟಾಗಿದೆ. ಕೊಲೆ, ಅಪಘಾತ ಅಥವಾ ಆತ್ಮಹತ್ಯೆ ಎಂಬ ಸತ್ಯಾಂಶ ತನಿಖೆ ಪೂರ್ಣಗೊಂಡ ಬಳಿಕ ತಿಳಿಯಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net